(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.11. ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಕರೆಯಲಾಗುವುದು ಎಂದು ಕೆಲ ದಿನಗಳ ಹಿಂದೆ ತಿಳಿಸಿದ್ದ ಆರೋಗ್ಯ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಈಗ ಯುಟರ್ನ್ ಹೊಡೆದಿದ್ದು, ಇದೀಗ ಸರ್ಕಾರದ ಮುಂದಿನ ಆದೇಶದವರೆಗೂ ಯಾವುದೇ ಹೊಸ ಪಡಿತರ ಚೀಟಿಗಳನ್ನ ಮಂಜೂರು ಮಾಡದಂತೆ ಆದೇಶ ನೀಡಿದ್ದು, ಈ ಮೂಲಕ ಹೊಸದಾಗಿ ಅರ್ಜಿ ಸಲ್ಲಿಸಲು ಮುಂದಾಗಿದ್ದ ರಾಜ್ಯದ ಜನತೆಗೆ ಬಿಗ್ ಶಾಕ್ ನೀಡಿದ್ದಾರೆ ಎಂದು ವರದಿ ತಿಳಿಸಿದೆ.
ಪಡಿತರ ಚೀಟಿಯಲ್ಲಿನ ತಿದ್ದಪಡಿ ಹಾಗೂ ಹೆಚ್ಚುವರಿ ಫಲಾನುಭವಿಗಳನ್ನ ಸೇರ್ಪಡಿಸಲು ಮಾತ್ರ ಅನುಮೋದನೆ ನೀಡಲಾಗಿದೆ. ಯಲ್ಲೋ ಬೋರ್ಡ್ ಹೊಂದಿದ್ದವರ ಬಿಪಿಎಲ್ ಕಾರ್ಡ್ ರದ್ದುಪಡಿಸಲಾಗುವುದಿಲ್ಲ ಅವರು ಸ್ಪಷ್ಟನೆ ನೀಡಿದ್ದು, ಇನ್ನೂ ಜೀವನಾಧಾರಕ್ಕಾಗಿ ವಾಣಿಜ್ಯ ಬಳಕೆಗೆ ತೆಗೆದುಕೊಳ್ಳುವ ತ್ರಿಚಕ್ರ ವಾಹನ ಅಥವಾ ಕಾರು (ಯಲ್ಲೋ ಬೋರ್ಡ್) ಹೊಂದಿದ್ದವರ ಬಿಪಿಎಲ್ ಕಾರ್ಡ್ ರದ್ದುಪಡಿಸಲಾಗುವುದಿಲ್ಲ ತಿಳಿಸಿದರು. ಇದಲ್ಲದೇ ಸ್ವಂತ ಕಾರು ಇದ್ದವರಿಗೆ ಬಿಪಿಎಲ್ ಕಾರ್ಡ್ ರದ್ದು ಮಾಡುವುದಾಗಿ ಮಾಹಿತಿ ನೀಡಿದ್ದರು ಎನ್ನಲಾಗಿದೆ.