(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.11. ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಶಕ್ತಿ ಯೋಜನೆ ಅಡಿಯಲ್ಲಿ ಉಚಿತ ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ಈ ಬೆನ್ನಲ್ಲೇ ಮತ್ತೊಂದು ಗುಡ್ ನ್ಯೂಸ್ ನೀಡಿದೆ ಎನ್ನಲಾಗಿದೆ. ಅದೇ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಾರಿಗೆ ಬಸ್ಸುಗಳಲ್ಲಿ ಪ್ಯಾನಿಕ್ ಬಟನ್ ಹಾಗೂ ವಾಹನದ ಟ್ರ್ಯಾಕಿಂಗ್ ವ್ಯವಸ್ಥೆ ಅಳವಡಿಸೋದಕ್ಕೆ ಒಪ್ಪಿಗೆ ಸೂಚಿಸಿದೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ KSRTC ಬಸ್ಸುಗಳ ಸಂಚಾರ ನಿಗಾ ವ್ಯವಸ್ಥೆ ಹಾಗೂ ಪ್ಯಾನಿಕ್ ಬಟನ್ ವ್ಯವಸ್ಥೆಯೊಂದಿಗೆ ಕೇಂದ್ರೀಕೃತ ನಿಯಂತ್ರಣ ಕೊಠಡಿ ಸ್ಥಾಪಿಸೋದಕ್ಕಾಗಿ 30.74 ಕೋಟಿ ಅನುದಾನಕ್ಕೆ ಒಪ್ಪಿಗೆ ನೀಡಲಾಗಿದ್ದು, ಈ ಯೋಜನೆ ಜಾರಿಯಿಂದ ಸಾರಿಗೆ ಬಸ್ಸುಗಳ ನೈಜ ಸಮಯದಲ್ಲಿ ಪ್ರಯಾಣಿಕರ ಮಾಹಿತಿ ವ್ಯವಸ್ಥೆ, ಸುಧಾರಿತ ನಿರ್ವಹಣಾ ಮಾಹಿತಿ ವ್ಯವಸ್ಥೆ, ಬಸ್ ಗಾಗಿ ಕಾಯುವ ಅನಿಶ್ಚಿತತೆ ಕೂಡ ಕಡಿಮೆಯಾಗಲಿದೆ.
