(ನ್ಯೂಸ್ ಕಡಬ)newskadaba.com ತಮಿಳುನಾಡು, ಆ.11. ಲಾರಿಯೊಂದು ನಿಯಂತ್ರಣ ತಪ್ಪಿ ಮೂರು ದ್ವಿಚಕ್ರ ವಾಹನಗಳ ಮೇಲೆ ಹರಿದ ಪರಿಣಾಮ ನಾಲ್ವರು ಮೃತಪಟ್ಟ ಘಟನೆ ತಮಿಳುನಾಡು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದ್ದು, ವೇಗವಾಗಿ ಬರುತ್ತಿದ್ದ ಟ್ಟಿಪ್ಪರ್ ನಿಯಂತ್ರಣ ತಪ್ಪಿದೆ. ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಚಲಿಸಿದ್ದು, ಈ ವೇಳೆ, ಮೂರು ದ್ವಿಚಕ್ರ ವಾಹನಗಳಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಮೂರು ಬೈಕ್ ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಸ್ತೆ ಮಧ್ಯದ ತಡೆಗೋಡೆಗೆ ಢಿಕ್ಕಿಯಾಗಿ ಲಾರಿ ನಿಂತಿದ್ದು, ಸ್ವಲ್ಪ ಸಮಯದವರೆಗೆ ಸಂಚಾರ ಅಸ್ತವ್ಯಸ್ತಗೊಂಡಿತ್ತು.
ಅಪಘಾತದ ಬಗ್ಗೆ ಮಾಹಿತಿ ಪಡೆದ ಗುಡುವಂಚೇರಿ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಅಲ್ಲದೇ ಅಪಘಾತದಲ್ಲಿ ಮೃತಪಟ್ಟವರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
