(ನ್ಯೂಸ್ ಕಡಬ)newskadaba.com ನವದೆಹಲಿ, ಆ.12. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಲೋಕಸಭಾ ಕ್ಷೇತ್ರವಾದ ಕೇರಳದ ವಯನಾಡ್ ಗೆ ಇಂದಿನಿಂದ ಎರಡು ದಿನಗಳ ಭೇಟಿ ನೀಡಲಿದ್ದಾರೆ ಎಂದು ವರದಿ ತಿಳಿಸಿದೆ.
‘ಮೋದಿ ಉಪನಾಮ’ ಮಾನನಷ್ಟ ಪ್ರಕರಣದಲ್ಲಿ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದ ನಂತರ ಲೋಕಸಭೆಯಲ್ಲಿ ಸಂಸತ್ತಿನ ಸದಸ್ಯರಾಗಿ ಮರು ಸೇರ್ಪಡೆಯಾದ ನಂತರ ತಮ್ಮ ಸಂಸದೀಯ ಕ್ಷೇತ್ರ ಇದು ಅವರ ಮೊದಲ ಭೇಟಿಯಾಗಿದೆ.
ರಾಹುಲ್ ಗಾಂಧಿಗೆ ಅದ್ದೂರಿ ಸ್ವಾಗತ ಕೋರಲು ಕೇರಳ ಕಾಂಗ್ರೆಸ್ ಸಿದ್ಧತೆ ನಡೆಸಿದ್ದು, ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಕೇರಳ ರಾಜ್ಯ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ವಿ.ಟಿ.ಸಿದ್ದಿಕ್, ”ರಾಹುಲ್ ಗಾಂಧಿ ಆಗಸ್ಟ್ 12ರಂದು ವಯನಾಡಿಗೆ ಬರಲಿದ್ದಾರೆ. ಅವರಿಗೆ ಅದ್ಧೂರಿ ಸ್ವಾಗತ ಏರ್ಪಡಿಸಲಿದ್ದೇವೆ. ಆಗಸ್ಟ್ 12 ಮತ್ತು 13 ರಂದು ರಾಹುಲ್ ಗಾಂಧಿ ವಯನಾಡ್ ನಲ್ಲಿ ಇರಲಿದ್ದಾರೆ” ಎಂದು ತಿಳಿಸಿದ್ದಾರೆ.