ತಿರುಮಲ ಬೆಟ್ಟದಲ್ಲಿ ಚಿರತೆ ದಾಳಿ..! – ಬಾಲಕಿ ಮೃತ್ಯು

(ನ್ಯೂಸ್ ಕಡಬ)newskadaba.com ಆಂದ್ರಪ್ರದೇಶ, ಆ.12. ತಿರುಮಲ ಬೆಟ್ಟದ ಪಾದಾಚಾರಿ ಮಾರ್ಗದಲ್ಲಿ ಚಿರತೆ ದಾಳಿಗೆ ಆರು ವರ್ಷದ ಬಾಲಕಿ ಬಲಿಯಾಗಿದ್ದಾಳೆ ಎಂದು ತಿಳಿದುಬಂದಿದೆ. ಕುಟುಂಬವೊಂದು ದೇವರ ದರ್ಶನ ಪಡೆಯಲು ತಿರುಮಲಕ್ಕೆ ತೆರಳಿತ್ತು. ತಿರುಪತಿ ತಲುಪಿ ಬಳಿಕ ಅಲಿಪಿರಿ ಕಾಲುದಾರಿ ಮೂಲಕ ರಾತ್ರಿ 11 ಗಂಟೆ ವೇಳೆಗೆ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನಕ್ಕೆ ತೆರಳುತ್ತಿದ್ದರು. ಕಾಲ್ನಡಿಗೆ ಮೂಲಕ ಬೆಟ್ಟ ಹತ್ತಿ ಹೋಗುತ್ತಿದ್ದ ಕುಟುಂಬಸ್ಥರ ಮೇಲೆ ಚಿರತೆ ದಾಳಿ ಮಾಡಿದೆ ಎನ್ನಲಾಗಿದೆ.

ಮುಂದೆ ನಡೆದುಕೊಂಡು ಹೋಗುತ್ತಿದ್ದ 6 ವರ್ಷದ ಲಕ್ಷಿತಾ ಎಂಬ ಬಾಲಕಿಯ ಮೇಲೆ ದಾಳಿ ನಡೆಸಿ, ಕಾಡಿಗೆ ಎಳೆದೊಯ್ದಿದೆ. ಚಿರತೆ ದಾಳಿಗೆ ಹೆದರಿದ ಕುಟುಂಬಸ್ಥರು ಜೋರಾಗಿ ಕಿರುಚಿಕೊಂಡಿದ್ದು, ಚಿರತೆ ಮಗುವನ್ನು ಕಾಡಿಗೆ ಎಳೆದೊಯ್ದ ಬಳಿಕ ಪೋಷಕರು ಭದ್ರತಾ ಸಿಬ್ಬಂದಿಗೆ ದೂರು ನೀಡಿದ್ದಾರೆ. ಪೊಲೀಸರು ಶೋಧ ನಡೆಸಿದಾಗ ದೇವಸ್ಥಾನದಿಂದ ಸ್ವಲ್ಪ ದೂರದಲ್ಲಿ ಮಗುವಿನ ಶವ ಪತ್ತೆಯಾಗಿದೆ. ಚಿರತೆ ಮಗುವಿನ ದೇಹದ ಅರ್ಧ ಭಾಗವನ್ನು ತಿಂದು ಹಾಕಿದೆ ಎಂದು ವರದಿ ತಿಳಿಸಿದೆ.

Also Read  ಮನೆಯ ಹಿಂಬಾಗಿಲು ಮುರಿದು ಒಳಪ್ರವೇಶಿಸಿ ಚಿನ್ನಾಭರಣ ಕಳವು

 

error: Content is protected !!
Scroll to Top