(ನ್ಯೂಸ್ ಕಡಬ)newskadaba.com ಮಂಗಳೂರು, ಆ.12. 30 ವರ್ಷಗಳ ಹಿಂದೆ ಮನೆಗೆ ಬೆಂಕಿ ಹಚ್ಚಿ ತಲೆಮರೆಸಿಕೊಂಡಿದ್ದ ಹಳೇ ಪ್ರಕರಣದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಆರೋಪಿಯನ್ನು ಮೊಹಮ್ಮದ್ ಮುಸ್ತಫಾ(63) ಗುರುತಿಸಲಾಗಿದೆ. ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ 1993 ನೇ ಇಸವಿಯಲ್ಲಿ ಮನೆಯೊಂದಕ್ಕೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಭಾಗಿಯಾಗಿ ನಂತರ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.
ಆರೋಪಿಯನ್ನು ಫಲಿಮಾರು ಪರಿಸರದಲ್ಲಿ ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಸುರತ್ಕಲ್ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿರುತ್ತದೆ. ಸುರತ್ಕಲ್ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ. ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ ಎ ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐಯವರಾದ ಸುದೀಪ್ ಎಂ.ವಿ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.