ಬಿಬಿಎಂಪಿ ಕಚೇರಿಯಲ್ಲಿ ಬೆಂಕಿ ಆಕಸ್ಮಿಕ..! – 8 ನೌಕರರಿಗೆ ಗಾಯ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.12. ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕೇಂದ್ರ ಕಚೇರಿಯ ಆವರಣದಲ್ಲಿ ಭಾರಿ ಬೆಂಕಿ ಅವಗಢ ಸಂಭವಿಸಿದೆ. 8ಕ್ಕೂ ಅಧಿಕ ಮಂದಿ ನೌಕರರಿಗೆ ತೀವ್ರ ಸುಟ್ಟ ಗಾಯಗಳಾಗಿದ್ದು, ಗುಣಮಟ್ಟ ನಿಯಂತ್ರಣ ಪ್ರಯೋಗಾಲಯ ಮತ್ತು ಕಚೇರಿಯಲ್ಲಿ ಈ ಘಟನೆ ಸಂಭವಿಸಿದೆ.

ಕೆಲಸ ಮಾಡುತ್ತಿದ್ದ ಬಹುತೇಕ ಎಲ್ಲ ನೌಕರರಿಗೂ ಸುಟ್ಟು ಗಾಯಗಳಾಗಿದ್ದು, ಬೆಂಕಿ ಅವಗಢ ಸಂಭವಿಸಿದ ಬೆನ್ನಲ್ಲಿಯೇ ಬಿಬಿಎಂಪಿ ಆಯುಕ್ತರು ಹಾಗೂ ಡಿಸಿಪಿ ಶ್ರೀನಿವಾಸ್  ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಗಾಯಗೊಂಡ ಸಿಬ್ಬಂದಿಗಳನ್ನು ಅಧಿಕಾರಿಗಳು ಸೇಂಟ್ ಮಾರ್ಥಾಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಬಂದ ಅಗ್ನಿಶಾಮಕದಳ ಬೆಂಕಿಯನ್ನು ಸಂಪೂರ್ಣ ನಂದಿಸಿದ್ದು, ಪರಿಸ್ಥಿತಿ ಹತೋಟಿಗೆ ಬಂದಿದೆ.

Also Read  ಆನ್‍ಲೈನ್ ಬೆಟ್ಟಿಂಗ್ ದಂಧೆಗೆ ಬಿದ್ದು ಸ್ವಂತ ಮನೆಯಿಂದಲೇ ಚಿನ್ನ ಕದ್ದ ಯುವಕ - ಪೊಲೀಸರ ತನಿಖೆ ವೇಳೆ ಮನೆಯವರಿಗೆ ಕಾದಿತ್ತು ಶಾಕ್

error: Content is protected !!
Scroll to Top