ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ – 500 ರೂ. ಹೆಚ್ಚಿನ ಪ್ರೋತ್ಸಾಹಧನ

(ನ್ಯೂಸ್ ಕಡಬ)newskadaba.com ನವದೆಹಲಿ, ಆ.12. ಕೇಂದ್ರ ಸರ್ಕಾರವು ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿಸುದ್ದಿ ನೀಡಿದ್ದು, ಅಂಗನವಾಡಿ ಕಾರ್ಯಕರ್ತೆಯರಿಗೆ ಹೆಚ್ಚಿನ 500 ರೂ, ಪ್ರೋತ್ಸಾಹಧನ ನೀಡಲಾಗುವುದು ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಮಿಷನ್ ಪೋಷಣ್ 2.0 ಅಡಿಯಲ್ಲಿ 2 ಲಕ್ಷ ಅಂಗನವಾಡಿ ಕೇಂದ್ರಗಳನ್ನು ಸಕ್ಷಮ್ ಅಂಗನವಾಡಿಗಳಾಗಿ ಮೇಲ್ದರ್ಜೆಗೇರಿಸಲಾಗುವುದು ಪೌಷ್ಠಿಕಾಂಶ ಮತ್ತು ಆರಂಭಿಕ ಮಕ್ಕಳ ಆರೈಕೆ ಮತ್ತು ಶಿಕ್ಷಣ ಸೇವೆಗಳ ಸುಧಾರಿತ ವಿತರಣೆಗಾಗಿ ಮಿಷನ್ ಪೋಷಣ್ 2.0 ಅಡಿಯಲ್ಲಿ 2 ಲಕ್ಷ ಅಂಗನವಾಡಿ ಕೇಂದ್ರಗಳನ್ನು ಸಕ್ಷಮ್ ಅಂಗನವಾಡಿಗಳಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಮಾಹಿತಿ ನೀಡಿದರು.


ಲೋಕಸಭೆಯಲ್ಲಿ ನೀಡಿದ ಲಿಖಿತ ಉತ್ತರದಲ್ಲಿ ಸಚಿವರು, ಇದಕ್ಕಾಗಿ 2025-26 ರವರೆಗೆ ವರ್ಷಕ್ಕೆ 40 ಸಾವಿರ ರೂ. ಪೋಷಣ್ ಅಭಿಯಾನದಡಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸುಮಾರು 11 ಲಕ್ಷ ಸ್ಮಾರ್ಟ್‌ ಫೋನ್‌ಗಳನ್ನು ನೀಡಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಮಕ್ಕಳ ಮಾಸಿಕ ಬೆಳವಣಿಗೆಯ ಮಾಪನ ಮತ್ತು ಉದ್ದೇಶಿತ ಮನೆ ಭೇಟಿಗಾಗಿ 500 ರೂಪಾಯಿಗಳ ಪ್ರೋತ್ಸಾಹಧನವನ್ನು ನೀಡಲಾಗುತ್ತದೆ ಎಂದು ಅವರು ಹೇಳಿದರು.

error: Content is protected !!

Join the Group

Join WhatsApp Group