ರಾಜ್ಯದ 1,695 ಅನಧಿಕೃತ ಶಾಲೆಗಳನ್ನು ಬಂದ್ ಮಾಡಲಾಗುವುದು – ಶಿಕ್ಷಣ ಸಚಿವ ಮಧು ಬಂಗಾರಪ್ಪ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.12. ರಾಜ್ಯಾದ್ಯಂತ ಒಟ್ಟು 1,695 ಅನಧಿಕೃತ ಶಾಲೆಗಳಿದ್ದು, ಈ ಶಾಲೆಗಳಿಗೆ ತಮ್ಮ ಲೋಪವನ್ನು ಸರಿಪಡಿಸಲು ಸಮಯವನ್ನು ನೀಡಬೇಕಿದೆ. ಸಮಯ ಅವಕಾಶ ನೀಡಿ ಹಂತ ಹಂತವಾಗಿ ಈ ಶಾಲೆಗಳನ್ನು ಮುಚ್ಚಲಾಗುತ್ತದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಎಸ್.ಮಧು ಬಂಗಾರಪ್ಪ ಅವರು ಹೇಳಿದರು.


ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅನಧಿಕೃತ ಶಾಲೆಗಳನ್ನು ಮುಚ್ಚಿಸುವುದು ದೊಡ್ಡ ವಿಷಯವಲ್ಲ. ಆ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳ ಹಿತ ಕಾಯುವುದು ಸರಕಾರದ ಕರ್ತವ್ಯವಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು. ರಾಜ್ಯದಲ್ಲಿ 26 ಶಾಲೆಗಳು ನೋಂದಣಿಯನ್ನೇ ಮಾಡಿಲ್ಲ, ಅನುಮತಿ ಪಡೆಯದೆ ಉನ್ನತೀಕರಿಸಿರುವ ಶಾಲೆಗಳು 76, ಇತರೆ ಪಠ್ಯಕ್ರಮ ಅನುಸರಿಸುತ್ತಿರುವ ಶಾಲೆಗಳು 143, ಅನುಮತಿ ಪಡೆಯದೆ ಹೆಚ್ಚುವರಿ ವಿಭಾಗಗಳನ್ನು ಪಡೆದಿರುವ 631, ಅನುಮತಿ ಪಡೆಯದೆ ಸ್ಥಳಾಂತರಿಸಿರುವ 190, ಅನುಮತಿ ಪಡೆಯದೆ ಹಸ್ತಾಂತರ ಮಾಡಿರುವ 15, ಒಂದೇ ಕಟ್ಟಡದಲ್ಲಿ ಕೇಂದ್ರ ಮತ್ತು ರಾಜ್ಯ ಪಠ್ಯಕ್ರಮ ಬೋಧಿಸುತ್ತಿರುವ ಶಾಲೆಗಳು 95 ಶಾಲೆಗಳಿವೆ ಎಂದು ಮಾಹಿತಿ ನೀಡಿದರು.

Also Read  ನಾಳೆ (14): ದ.ಕ. ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ

error: Content is protected !!
Scroll to Top