ಕಾಲೇಜಿನಲ್ಲಿ ಡ್ಯಾನ್ಸ್ ಮಾಡುವಾಗ ಹೃದಯಾಘಾತ – ಬಾಲಕಿ ಮೃತ್ಯು

(ನ್ಯೂಸ್ ಕಡಬ)newskadaba.com ಕರೀಂನಗರ, ಆ.10. ಫ್ರೆಶರ್ಸ್ ಡೇ ಪಾರ್ಟಿಯಲ್ಲಿ ನೃತ್ಯ ಮಾಡುವಾಗ ಕುಸಿದು ಬಿದ್ದು ಹೃದಯಾಘಾತದಿಂದ ವಿದ್ಯಾರ್ಥಿನಿ ಮೃತಪಟ್ಟ ಘಟನೆ ತೆಲಂಗಾಣದ ಕರೀಂನಗರ ಜಿಲ್ಲೆಯಲ್ಲಿ ನಡೆದಿದೆ.

ಪ್ರದೀಪ್ತಿ ಮೃತ ದುರ್ದೈವಿಯಾಗಿದ್ದು, ಬಾಲಕಿ ಗಂಗಾಧರದ ಮಾದರಿ ಶಾಲೆಯಲ್ಲಿ ಓದುತ್ತಿದ್ದಳು ಎನ್ನಲಾಗಿದೆ. ಫ್ರೆಶರ್ಸ್ ಡೇ ಹಿನ್ನೆಲೆಯಲ್ಲಿ ಡ್ಯಾನ್ಸ್​ ನ್ನು ಆಯೋಜಿಸಲಾಗಿದ್ದು, ಪ್ರದೀಪ್ತಿ ವಿದ್ಯಾರ್ಥಿಗಳೊಂದಿಗೆ ಡ್ಯಾನ್ಸ್ ಮಾಡುತ್ತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾಳೆ. ಕೂಡಲೇ ಆಕೆಗೆ ಶಿಕ್ಷಕರು ಸಿಪಿಆರ್‌ ನೀಡಿದ್ದು, ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಆಕೆ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾಳೆ.

Also Read  2019 ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಮತ ಬೇಟೆಯಾಡಿದ ಬಿಜೆಪಿ ➤ ಕಡಬದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

 

error: Content is protected !!
Scroll to Top