‘ಗ್ಯಾರಂಟಿ ಯೋಜನೆಗಳಿಂದ ಪ್ರತಿ ಕುಟುಂಬಕ್ಕೂ ತಿಂಗಳಿಗೆ 5 ಸಾವಿರ ರೂ.ಸೌಲಭ್ಯ’ – ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ)newskadaba.com ಅಥಣಿ, ಆ.12. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಿಂದ ರೈತರು, ಬಡವರು, ಮಹಿಳೆಯರು, ಕಾರ್ಮಿಕರು, ಹಿಂದುಳಿದ ವರ್ಗಗಳಿಗೆ ಸೇರಿದ ಪ್ರತಿ ಕುಟುಂಬಕ್ಕೆ ಮಾಸಿಕ ಐದು ಸಾವಿರ ರೂ. ಲಭಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಶಕ್ತಿ ಯೋಜನೆಯಡಿ ಇದುವರೆಗೆ 35 ಕೋಟಿ ಮಹಿಳೆಯರು ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ. ಇದರಿಂದ ಸರ್ಕಾರದ ಆದಾಯ ಕೂಡ ಹೆಚ್ಚಾಗಲಿದೆ ಎಂದರು. ಇನ್ನು ರಾಜ್ಯದ 1.30 ಕೋಟಿಗೂ ಅಧಿಕ ಕುಟುಂಬಗಳಿಗೆ ಪ್ರತಿ ತಿಂಗಳು 2 ಸಾವಿರ ರೂ. ನೀಡುವ ‘ಗೃಹಲಕ್ಷ್ಮೀ’ ಯೋಜನೆ ದೇಶದಲ್ಲೇ ಅಪರೂಪದ ಯೋಜನೆಯಾಗಿದ್ದು, ಈ ಯೋಜನೆಗೆ ವರ್ಷಕ್ಕೆ 35 ಸಾವಿರ ಕೋಟಿ ರೂ. ವಿನಿಯೋಗಿಸಲಾಗುತ್ತಿದ್ದು ಆ.27ರಂದು ಬೆಳಗಾವಿಯಲ್ಲೇ ಚಾಲನೆ ನೀಡಲಾಗುವುದು ಎಂದಿದ್ದಾರೆ.

Also Read  ನಿಯಂತ್ರಣ ತಪ್ಪಿ ಕಾರು ಪಲ್ಟಿ: ತಂದೆ ಮೃತ್ಯು, ಮಗಳಿಗೆ ಗಂಭೀರ ಗಾಯ

error: Content is protected !!
Scroll to Top