ಸಿದ್ದರಾಮಯ್ಯ ತಿಥಿ ಪತ್ರಿಕೆ ಪೋಸ್ಟ್..!! – ಬಿಜೆಪಿ ಕಾರ್ಯಕರ್ತನ ವಿರುದ್ಧ ಪ್ರಕರಣ

(ನ್ಯೂಸ್ ಕಡಬ)newskadaba.com ಮೂಡಿಗೆರೆ, ಆ.12. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತಿಥಿ ಪತ್ರಿಕೆಯನ್ನು ರಚಿಸಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಸಂಬಂಧ ಬಿಜೆಪಿ ಕಾರ್ಯಕರ್ತನ ವಿರುದ್ಧ ಕಾಂಗ್ರೆಸ್ ದೂರು ನೀಡಿದ್ದು, ಸಿದ್ದರಾಮಯ್ಯ ಅವರ ಅಭಿಮಾನಿಗಳು ನೀಡಿದ ದೂರಿನ ಅನ್ವಯ ಪ್ರಜ್ವಲ್ ವಿರುದ್ಧ ಚಿಕ್ಕಮಗಳೂರು ಸೆನ್ ಪೊಲೀಸ್ ಠಾಣೆ ಹಾಗೂ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಡಿಗೆರೆ ಪಟ್ಟಣದ ಪ್ರಜ್ವಲ್ ಎಂಬಾತ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಪೋಸ್ಟ್ ರಚಿಸಿ ಮೂಡಿಗೆರೆ ಫೇಸ್​ಬುಕ್ ಮತ್ತು ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದ. ಇದನ್ನು ಗಮನಿಸಿದ ಸಿದ್ದರಾಮಯ್ಯ ಅಭಿಮಾನಿಗಳ ಬಳಗವು ಪ್ರಜ್ವಲ್ ವಿರುದ್ಧ ಸೆನ್ ಪೊಲೀಸ್ ಠಾಣೆ ಮತ್ತು ಮೂಡಿಗೆರೆ ಪೊಲೀಸ್ ಠಾಣೆಗೆ ದೂರು ನೀಡಿದ್ದು ಈ ಹಿನ್ನಲೆಯಲ್ಲಿ ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ.

Also Read  ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ  ➤  20 ಪ್ರವಾಸಿಗರಿಗೆ ಗಾಯ

error: Content is protected !!
Scroll to Top