ನಿರುದ್ಯೋಗಿ ಡಿಪ್ಲೋಮಾ, ಪದವೀಧರರಿಗೆ ಗುಡ್ ನ್ಯೂಸ್ – `ಯುವನಿಧಿ’ ಜಾರಿ ಬಗ್ಗೆ ಸಿಎಂ ಸ್ಪಷ್ಟನೆ

(ನ್ಯೂಸ್ ಕಡಬ)newskadaba.com ಮೈಸೂರು, ಆ.12. ರಾಜ್ಯ ಸರ್ಕಾರದ 5 ನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಯನ್ನು ಡಿಸೆಂಬರ್ ಅಥವಾ ಜನವರಿಯಲ್ಲಿ ಚಾಲನೆ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿರುದ್ಯೋಗಿ ಡಿಪ್ಲೋಮಾ, ಪದವೀಧರರಿಗೆ 2 ವರ್ಷಗಳವರೆಗೆ ಅಂದರೆ 24 ತಿಂಗಳು ಡಿಪ್ಲೋಮಾ ಮಾಡಿದವರಿಗೆ 1,500 ರೂ. ಹಾಗೂ ಪದವೀಧರರಿಗೆ 3000 ರೂ. ನಿರುದ್ಯೋಗ ಭತ್ಯೆ ನೀಡುವ ಯುವನಿಧಿ ಯೋಜನೆಯನ್ನು ಡಿಸೆಂಬರ್ ಅಥವಾ ಜನರಿಯಲ್ಲಿ ಜಾರಿಗೆ ತರುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಇನ್ನು ಆಗಸ್ಟ್ 29 ಅಥವಾ 30 ಕ್ಕೆ ಮಹಿಳೆಯರಿಗೆ 2,000 ರೂ.ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆಗೆ ಬೆಳಗಾವಿಯಲ್ಲಿ ಚಾಲನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

Also Read  ಬೆಳ್ತಂಗಡಿ: ಅಕ್ರಮವಾಗಿ ದಾಸ್ತಾನಿರಿಸಿದ್ದ ಗೋಡೌನ್ ಮೇಲೆ ತಹಶೀಲ್ದಾರ್ ದಾಳಿ ➤ ಆರೋಪಿ ಸಹಿತ 37.5 ಕ್ವಿಂಟಾಲ್ ಅಕ್ಕಿ ವಶ

error: Content is protected !!
Scroll to Top