ಕಡಬ: ರೆಂಜಿಲಾಡಿಯಲ್ಲಿ ಇಬ್ಬರನ್ನು ಬಲಿ ಪಡೆದಿದ್ದ ಕಾಡಾನೆ ಆನೆ ಶಿಬಿರದಲ್ಲಿ ಸಾವು

(ನ್ಯೂಸ್ ಕಡಬ)newskadaba.com ಕಡಬ, ಆ.12. ರೆಂಜಿಲಾಡಿಯಲ್ಲಿ ಇಬ್ಬರನ್ನು ಬಲಿ ಪಡೆದ ಕಾರಣಕ್ಕೆ ಕೊಂಬಾರು ಸಮೀಪ ಸೆರೆ ಹಿಡಿಯಲಾಗಿದ್ದ ಕಾಡಾನೆಯೊಂದು ಕೊಡಗಿನ ಮತ್ತಿಗೋಡು ಆನೆ ಶಿಬಿರದಲ್ಲಿ ಮೃತಪಟ್ಟಿದೆ ಎಂದು ವರದಿಯಾಗಿದೆ. ಕಡಬದಲ್ಲಿ ಸೆರೆ ಹಿಡಿಯಲಾಗಿದ್ದ ಕಾಡಾನೆಯನ್ನು ಕೊಡಗಿನ ಮತ್ತಿಗೋಡು ಆನೆ ಶಿಬಿರಕ್ಕೆ ಸೇರಿಸಲಾಗಿತ್ತು. ಆನೆ ಮೃತಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸುವ ಕಾರ್ಯ ಮಾಡಲಾಗಿದೆ.

ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಮೀನಾಡಿ ಸಮೀಪದ ನೈಲದಲ್ಲಿ ಫೆಬ್ರವರಿ 20ರಂದು ಬೆಳ್ಳಂ ಬೆಳಗ್ಗೆ  ಕಾಡಾನೆ ದಾಳಿಗೆ ರಂಜಿತಾ (24) ಹಾಗೂ ರಮೇಶ್ ರೈ (58) ಎಂಬವರು ಮೃತಪಟ್ಟಿದ್ದರು. ಘಟನೆಯಿಂದ ಆಕ್ರೋಶಗೊಂಡಿದ್ದ ಸಾರ್ವಜನಿಕರು ಕಾಡಾನೆ ಸೆರೆ ಹಿಡಿದು ಸ್ಥಳಾಂತರಿಸುವಂತೆ ಒತ್ತಾಯಿಸಿದ್ದರು. ಬಳಿಕದ ಬೆಳವಣಿಗೆಯಲ್ಲಿ ಘಟನಾ ಸ್ಥಳಕ್ಕೆ ಅಂದಿನ ಜಿಲ್ಲಾಧಿಕಾರಿ ರವಿಕುಮಾರ್ ಹಾಗೂ ಡಿಸಿಎಫ್ ದಿನೇಶ್ ಕುಮಾರ್ ಅವರು ಭೇಟಿ ನೀಡಿ ಕಾಡಾನೆ ಸೆರೆ ಹಿಡಿಯುವ ಭರವಸೆ ನೀಡಿದ್ದರು ಎನ್ನಲಾಗಿದೆ.

Also Read  ನೇರ ನಗದು ವರ್ಗಾವಣೆ ಮೂಲಕ ರೈತರಿಗೆ 2100 ಕೋಟಿ ರೂ ಬೆಳೆ ವಿಮೆ ಪಾವತಿ: ರಾಜ್ಯ ಸರ್ಕಾರ

 

error: Content is protected !!
Scroll to Top