17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 14. ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿರುವುದಾಗಿ ವರದಿಯಾಗಿದೆ.


ಬಂಧಿತತ ಆರೋಪಿಯನ್ನು ಪುದು ಗ್ರಾಮದ ಕುಮ್ಡೇಲು ನಿವಾಸಿ ಕೃಷ್ಣ ಎಂದು ಗುರುತಿಸಲಾಗಿದೆ. ಈತ ಕಳ್ಳತನ ಪ್ರಕರಣದಲ್ಲಿ ಜೈಲುವಾಸ ಅನುಭವಿಸಿ ಜಾಮೀನು ಮೇಲೆ ಬಿಡುಗಡೆಗೊಂಡಿದ್ದು, ಆ ಬಳಿಕ ನ್ಯಾಯಾಲಯಕ್ಕರ ಹಾಜರಾಗದೇ ಸುಮಾರು 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.

ಈತನನ್ನು ಪೊಲೀಸ್ ನಿರೀಕ್ಷಕ ಎಚ್. ನಾಗರಾಜ್ ಅವರ ಮಾರ್ಗದರ್ಶನದಲ್ಲಿ ಗ್ರಾಮಾಂತರ ಠಾಣಾಧಿಕಾರಿ ಹರೀಶ್ ಹಾಗೂ ಸಿಬ್ಬಂದಿಗಳಾದ ಗಣೇಶ್ ಪ್ರಸಾದ್, ರಾಧಾಕೃಷ್ಣನ್, ಯೋಗೇಶ್ ಡಿ.ಎಲ್ ಹಾಗೂ ವಿಜಯ್ ರವರು ಮಾಹಿತಿ ಸಂಗ್ರಹಿಸಿ ಬಡಗ ಮಿಜಾರು ಎಂಬಲ್ಲಿ ಪತ್ತೆ ಹಚ್ಚಿ ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದುಬಂದಿದೆ.

Also Read  ಬಂಟ್ವಾಳ: ಮೂರ್ಛೆ ರೋಗಕ್ಕೆ ಒಳಗಾದ ಚಾಲಕ ➤ ಹಲವು ವಾಹನಗಳಿಗೆ ಲಾರಿ ಢಿಕ್ಕಿ

error: Content is protected !!
Scroll to Top