ಗಾಂಜಾ ಮಾರಾಟಕ್ಕೆ ಯತ್ನ- ಆರೋಪಿ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 14. ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ ಘಟನೆ ಚಾರ್ಮಾಡಿಯಲ್ಲಿ ನಡೆದಿದೆ.

ಬಂಧಿತನನ್ನು ಮೂಲತಃ ಕಕ್ಕಿಂಜೆ ನಿವಾಸಿಯಾಗಿರುವ,‌ ಪ್ರಸ್ತುತ ಬಂಟ್ವಾಳ ತಾಲೂಕು ಸಜಿಪನಡು ಗ್ರಾಮದ ಲಕ್ಷ್ಮಣಕಟ್ಟೆ ಬಳಿಯ ನೌಫಲ್ ಎಂದು ಗುರುತಿಸಲಾಗಿದೆ. ಆರೋಪಿ ನೌಫಲ್ ಪೊಲೀಸರನ್ನು ಕಂಡು ಅನುಮಾನಾಸ್ಪದವಾಗಿ ವರ್ತಿಸಿದ್ದು, ಈ ಬಗ್ಗೆ ಸಂದೇಹಗೊಂಡ ಪೊಲೀಸರು ಆತನ ಬಳಿ ವಿಚಾರಣೆಗೆಂದು ಬಂದಾಗ ಓಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಪೊಲೀಸ್ ಸಿಬ್ಬಂದಿ ಆತನನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

Also Read  ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ಯುವಕವಿಗೋಷ್ಠಿ

ಆರೋಪಿಯಿಂದ ಪ್ಲಾಸ್ಟಿಕ್ ಕೈಚೀಲದಲ್ಲಿದ್ದ 150 ಗ್ರಾಂ ಗಾಂಜಾದ ಮೊಗ್ಗು, ಎಲೆ ಮತ್ತು ಬೀಜ ಇರುವುದನ್ನು ವಶಪಡಿಸಿಕೊಳ್ಳಲಾಗಿದೆ. ವಸ್ತುಗಳ ಒಟ್ಟು ಮೌಲ್ಯ ಅಂದಾಜು 4 ಸಾವಿರ ರೂ.ಆಗಿದ್ದು, ಈ ಬಗ್ಗೆ ಎನ್‌ಡಿಪಿಎಸ್ ಕಾಯ್ದೆಯಡಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!
Scroll to Top