ಹೃದಯಾಘಾತ- ನರ್ಸಿಂಗ್ ವಿದ್ಯಾರ್ಥಿನಿ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 14. ಜ್ವರದಿಂದ ಬಳಲಿ ಚಿಕಿತ್ಸೆ ಪಡೆದು, ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದ ನರ್ಸಿಂಗ್ ವಿದ್ಯಾರ್ಥಿನಿಯೋರ್ವಳು ಏಕಾಏಕಿ ಅಸ್ವಸ್ಥಗೊಂಡು ಮೃತಪಟ್ಟ ಘಟನೆ ನೆರಿಯ ಗ್ರಾಮದ ಗಂಡಿಬಾಗಿಲು ಎಂಬಲ್ಲಿ ನಡೆದಿದೆ.


ಮೃತ ವಿದ್ಯಾರ್ಥಿನಿಯನ್ನು ನೆರಿಯ ಗ್ರಾಮದ ಗಂಡಿಬಾಗಿಲು ಜಾತಿಮಾರು ನಿವಾಸಿ ರಾಜು ದೇವಾಡಿಗ ಎಂಬವರ ಪುತ್ರಿ ಸುಮಾ ಎಂದು ಗುರುತಿಸಲಾಗಿದೆ. ಸುಮಾ ಮಂಗಳೂರಿನ ಕಾಲೇಜೊಂದರಲ್ಲಿ ಮೊದಲ ವರ್ಷದ ನರ್ಸಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದು, ಆಗಸ್ಟ್ 9ರಂದು ಅನಾರೋಗ್ಯದ ಕಾರಣ ಚಿಕಿತ್ಸೆ ಪಡೆದುಕೊಂಡಿದ್ದರು. ಆ. 11ರಂದು ಅನಾರೋಗ್ಯ ಉಲ್ಬಣಗೊಂಡ ಕಾರಣ ಮತ್ತೆ ಮಂಗಳೂರಿನಲ್ಲಿ ಚಿಕಿತ್ಸೆ ಪಡೆದು ಗುಣಮುಖವಾಗಿದ್ದು ಮನೆಗೆ ತೆರಳಿದ್ದರು. ಆದರೆ ಆ. 13ರಂದು ಸಂಜೆ ಮತ್ತೆ ಅಸ್ವಸ್ಥಗೊಂಡಿದ್ದು ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಮೃತಪಟ್ಟಿದ್ದಾಳೆ ಎನ್ನಲಾಗಿದೆ. ಮೃತರು ತಂದೆ – ತಾಯಿ ಸಹೋದರನನ್ನು ಅಗಲಿದ್ದಾರೆ.

Also Read  ಉಭಯ ತಾಲೂಕಿನಲ್ಲಿ ಇಂದು 62 ಮಂದಿಯಲ್ಲಿ ಕೊರೋನಾ ದೃಢ

error: Content is protected !!
Scroll to Top