ಕರ್ನಾಟಕದಲ್ಲಿ ಮುಂದಿನ ವರ್ಷದಿಂದ ರಾಷ್ಟ್ರೀಯ ಶಿಕ್ಷಣ ನೀತಿ ರದ್ದು – ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.15. ಕರ್ನಾಟಕದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಅನುಷ್ಠಾನವನ್ನು ರದ್ದು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ ಎಂದು ತಿಳಿದುಬಂದಿದೆ.

ಕೆಪಿಸಿಸಿ ಸರ್ವಸದಸ್ಯರ ಸಭೆಯಲ್ಲಿ ಮಾತನಾಡಿದ ಹಿರಿಯ ನಾಯಕ ರೆಹಮಾನ್ ಖಾನ್, ಆರ್‌ಎಸ್‍ಎಸ್ ಕಾರ್ಯಸೂಚಿಯ ಭಾಗವಾಗಿರುವ ಎನ್‍ಇಪಿಯನ್ನು ರಾಜ್ಯದಲ್ಲಿ ಕೈಬಿಡಬೇಕು ಎಂದು ಆಗ್ರಹಿಸಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಮುಂದಿನ ವರ್ಷದಿಂದ ಎನ್‍ಇಪಿ ರದ್ದು ಮಾಡುತ್ತೇವೆ. ಸಂವಿಧಾನಕ್ಕೆ ಪೂರಕವಾದ ಶಿಕ್ಷಣ ನೀತಿಯನ್ನು ಜಾರಿ ಮಾಡುತ್ತೇವೆ ಎಂದರು ಎನ್ನಲಾಗಿದೆ.

ಎನ್‍ಇಪಿ ಗೆ ಶಿಕ್ಷಕರು, ಪೋಷಕರು ಸೇರಿ ಎಲ್ಲರಿಂದ ವಿರೋಧವಿದ್ದು, ಬಿಜೆಪಿ ಅಧಿಕಾರದಲ್ಲಿರುವ ಇತರೆ ರಾಜ್ಯಗಳಲ್ಲೇ ಇದು ಅನುಷ್ಠಾನಕ್ಕೆ ಬಂದಿಲ್ಲ. ಆದರೆ ಕರ್ನಾಟಕದಲ್ಲಿ ಮಾತ್ರ ತರಾತುರಿಯಲ್ಲಿ ಇದನ್ನು ಅನುಷ್ಠಾನಕ್ಕೆ ತರಲಾಗಿತ್ತು ಎಂದು ಸಿದ್ದರಾಮಯ್ಯ ಹೇಳಿದ್ದಾರೆ ಎಂದು ವರದಿ ತಿಳಿಸಿದೆ.

Also Read  ದೆಹಲಿಯಾದ್ಯಂತ ಭಾರಿ ಮಳೆ ➤ ಕರ್ನಾಟಕದಲ್ಲಿ ಒಣ ಹವೆ ಮುಂದುವರಿಕೆ

 

error: Content is protected !!
Scroll to Top