ಕಡಬ: ಬೈಕ್ ಗೆ ಢಿಕ್ಕಿ ಹೊಡೆದು ಪರಾರಿಯಾದ ಕಾರು – ಸವಾರನಿಗೆ ಗಾಯ



(ನ್ಯೂಸ್ ಕಡಬ) newskadaba.com ಕಡಬ, ಆ. 15. ಕಾರೊಂದು ಬೈಕ್‌ಗೆ ಡಿಕ್ಕಿಯಾದ ಪರಿಣಾಮ ಸವಾರ ಗಾಯಗೊಂಡು, ಕಾರು ಪರಾರಿಯಾದ ಘಟನೆ ಉಪ್ಪಿನಂಗಡಿ-ಕಡಬ ರಾಜ್ಯ ಹೆದ್ದಾರಿಯ ಆತೂರಿನಲ್ಲಿ ಮಂಗಳವಾರದಂದು ಬೆಳಗ್ಗೆ ನಡೆದಿದೆ.







ಗಾಯಗೊಂಡ ಸವಾರನನ್ನು ಆಲಂಕಾರು ಗ್ರಾಮದ ಕಕ್ವೆ ನಿವಾಸಿ ಸುಧಾಕರ ಎಂದು ಗುರುತಿಸಲಾಗಿದೆ. ಸುಧಾಕರ ಅವರು ಮನೆಯಿಂದ ಉಪ್ಪಿನಂಗಡಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಆತೂರು ಎಂಬಲ್ಲಿ ತಲುಪುತ್ತಿದ್ದಂತೆ ಹಿಂದಿನಿಂದ ಬಂದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಪಲ್ಟಿಯಾಗಿ ಸವಾರ ಸುಧಾಕರ ಅವರು ರಸ್ತೆಗೆಸೆಯಲ್ಪಟ್ಟು ಗಾಯಗೊಂಡಿದ್ದರು. ಸ್ಥಳೀಯರು ಅವರನ್ನು ಉಪಚರಿಸಿ ಕೊಯಿಲ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಚಿಕಿತ್ಸೆ ನೀಡಿದ್ದಾರೆ. ಕಾರು ಚಾಲಕ ಕಾರನ್ನು ನಿಲ್ಲಿಸದೇ ಪರಾರಿಯಾಗಿದ್ದಾರೆ. ಈ ಕುರಿತು ಸವಾರ ಸುಧಾಕರ ಎಂಬವರು ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






error: Content is protected !!
Scroll to Top