ಮಂಗಳೂರು: ಮಾದಕ ವಸ್ತು ಮಾರಾಟಕ್ಕೆ ಯತ್ನ – ನಾಲ್ವರು ಸಿಸಿಬಿ ವಶಕ್ಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.16. MDMA ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ‘‘ಡ್ರಗ್ಸ್ ಫ್ರಿ ಮಂಗಳೂರು’’ ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಕಮೀಷನರೇಟ್ ವ್ಯಾಪ್ತಿಯ ಮಂಗಳೂರು ಉತ್ತರ ಪೊಲೀಸ್ ಠಾಣೆ ಹಾಗೂ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ಪ್ರತ್ಯೇಕ ಕಾರ್ಯಾಚರಣೆ ನಡೆಸಲಾಗಿದೆ. ನಾಲ್ವರನ್ನು ಬಂಧಿಸಿದ ಪೊಲೀಸರು 200 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಂಡಿರುತ್ತಾರೆ ಎನ್ನಲಾಗಿದೆ.

ಬೆಂಗಳೂರಿನಿಂದ ಎಂಡಿಎಂ ಮಾದಕ ವಸ್ತುವನ್ನು ಖರೀದಿಸಿಕೊಂಡು ಮಂಗಳೂರು ನಗರದ ಉತ್ತರ ಠಾಣಾ ವ್ಯಾಪ್ತಿಯ ಫಳ್ನೀರ್ ಪರಿಸರದಲ್ಲಿ ಕಾರಿನಲ್ಲಿ ಮೂವರು ವ್ಯಕ್ತಿಗಳು ಸೇರಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿಎ ಹೆಗಡೆ ಅವರ ನೇತೃತ್ವದ ಸಿಸಿಬಿ ಪೊಲೀಸರು ದಾಳಿ ನಡೆಸಿ ಮಾದಕ ವಸ್ತುವನ್ನು ಸಹಿತ ಇತರ ಸೊತ್ತುಗಳೊಂದಿಗೆ ನಾಲ್ವರನ್ನು ಬಂಧಿಸಲಾಗಿದೆ.

Also Read  ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ➤ ಪ್ರಾಧ್ಯಾಪಕ ಅಮಾನತು

ಪ್ರಕರಣವೊಂದರಲ್ಲಿ 100 ಗ್ರಾಂ ತೂಕದ ರೂ. 5,00,000 ಮೌಲ್ಯದ ಎಂಡಿಎಂಎ ಮಾದಕ ವಸ್ತು, ನಗದು ರೂ. 4000, ಕಾರು-1, ಮೊಬೈಲ್ ಫೋನ್ ಗಳು-3, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದ್ದು, ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 10,94,500 ರೂ. ಆಗಬಹುದು. ಆರೋಪಿಗಳ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.

error: Content is protected !!
Scroll to Top