ಏರ್ ಪೋರ್ಟ್ ನಲ್ಲಿ ಅಕ್ರಮ ಚಿನ್ನ ಸಾಗಾಟ – 600 ಗ್ರಾಂ. ತೂಕದ 30 ಚಿನ್ನದ ಬಿಸ್ಕೆಟ್ ವಶ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಆ. 16. ಅಕ್ರಮವಾಗಿ ಚಿನ್ನದ ಬಿಸ್ಕಟ್ ಸಾಗಿಸುತ್ತಿದ್ದ ವ್ಯಕ್ತಿಯೋರ್ವನನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದ ಘಟನೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವರದಿಯಾಗಿದೆ.

ಆರೋಪಿತ ವ್ಯಕ್ತಿಯೊಬ್ಬ ಕೋಲ್ಕತ್ತಾದಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಒಟ್ಟು 36 ಲಕ್ಷ ರೂಪಾಯಿ ಮೌಲ್ಯದ 600 ಗ್ರಾಂ ತೂಕದ 30 ಚಿನ್ನದ ಬಿಸ್ಕೆಟ್​​ಗಳನ್ನು ವಶಕ್ಕೆ ಪಡೆಯಲಾಗಿದೆ. ಚಿನ್ನದ ಮಾಲಿನೊಂದಿಗೆ ಆಗಮಿಸಿದ್ದ ಪ್ರಯಾಣಿಕ ಕೋಲ್ಕತ್ತಾದಿಂದ ಏರ್​​ಪೋರ್ಟ್​ಗೆ ಬಂದಿಳಿದಿದ್ದು, ಈ ವೇಳೆ ಅನುಮಾನಗೊಂಡು ತಪಾಸಣೆ ನಡೆಸಿದಾಗ ಚಿನ್ನ ಪತ್ತೆಯಾಗಿದೆನ್ನಲಾಗಿದೆ.

 

Scroll to Top