ಮುಲ್ಕಿ: ಸ್ಕೂಟರ್ ಗೆ ಖಾಸಗಿ ಬಸ್ ಢಿಕ್ಕಿ ► ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಮುಲ್ಕಿ, ಫೆ.05. ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮುಲ್ಕಿಯ ಪೆಟ್ರೋಲ್ ಪಂಪು ಬಳಿ ಸೋಮವಾರ ರಾತ್ರಿ ನಡೆದಿದೆ.

ಮೃತರನ್ನು ಕಾರ್ನಾಡು ಸಮೀಪದ ಸುಖಾನಂದ ನಗರ ನಿವಾಸಿ ಮಧುಸೂಧನ್ ಕಾಮತ್ (61) ಎಂದು ಗುರುತಿಸಲಾಗಿದೆ. ಸಿಂಡಿಕೇಟ್ ಬ್ಯಾಂಕಿನ ನಿವೃತ್ತ ಉದ್ಯೋಗಿಯಾಗಿದ್ದು ಮಧುಸೂಧನ್ ಕಾಮತ್‌ ಸೋಮವಾರ ರಾತ್ರಿ ತನ್ನ ಸ್ಕೂಟರ್ ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಮಂಗಳೂರು ಕಡೆಯಿಂದ ಹೋಗುತ್ತಿದ್ದ ಬಸ್ ಢಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡ ಮಧುಸೂಧನ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಗಳೂರು ಉತ್ತರ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  How to Activate Windows 7 with Windows Loader 2.2.2 By Daz

error: Content is protected !!
Scroll to Top