ಉದ್ಯೋಗಕ್ಕಾಗಿ ಬಂದಿದ್ದ ಯುವತಿ ನಾಪತ್ತೆ- ತಂದೆಯಿಂದ ದೂರು ದಾಖಲು

(ನ್ಯೂಸ್ ಕಡಬ) newskadaba.com  ಮಂಗಳೂರು, ಆ. 16. ಉದ್ಯೋಗಕ್ಕೆಂದು ಮಂಗಳೂರಿಗೆ ಬಂದಿದ್ದ ಯುವತಿ ನಾಪತ್ತೆಯಾಗಿರುವ ಕುರಿತು ಕದ್ರಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ನಾಪತ್ತೆಯಾದ ಯುವತಿಯನ್ನು ಹೊನ್ನಾವರದ ಸೋನಿಯಾ ರೋಡ್ರಿಗಸ್‌ (23) ಎಂದು ಗುರುತಿಸಲಾಗಿದೆ. ಸುಮಾರು 8 ತಿಂಗಳ ಹಿಂದೆ ಉದ್ಯೋಗಕ್ಕಾಗಿ ಮಂಗಳೂರಿಗೆ ಬಂದಿದ್ದ ಸೋನಿಯಾ, ಬೆಂದೂರಿನ ಅಪಾರ್ಟ್‌ಮೆಂಟ್‌ ವೊಂದರಲ್ಲಿ ವಾಸವಿರುವುದಾಗಿ ತಿಳಿಸಿದ್ದಳು. ಇತ್ತೀಚೆಗೆ ಕರೆಗಳನ್ನು ಸ್ವೀಕರಿಸದ ಹಿನ್ನೆಲೆಯಲ್ಲಿ ಅಪಾರ್ಟ್‌ಮೆಂಟ್‌ಗೆ ಬಂದು ವಿಚಾರಿಸಿದಾಗ ಆಕೆಯ ಬಗ್ಗೆ ಯಾವುದೇ ಮಾಹಿತಿ ಇಲ್ಲವೆಂದು ಅಪಾರ್ಟ್‌ ಮೆಂಟ್‌ನ ನಿವಾಸಿಗಳು ಹೇಳಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.  ಈ ಕುರಿತು ನಾಪತ್ತೆ ಪ್ರಕರಣ ದಾಖಲಾಗಿದೆ.

Also Read  ನೆಲ್ಯಾಡಿ: ನಾಡೋಳಿ ಡಯಾಗ್ನಾಸ್ಟಿಕ್ ಸೆಂಟರ್ ನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಉಚಿತ ಶಿಬಿರ ➤ ಮಧುಮೇಹ, ರಕ್ತದೊತ್ತಡ, ಹಿಮೋಗ್ಲೋಬಿನ್ ತಪಾಸಣೆ ಉಚಿತ

error: Content is protected !!
Scroll to Top