ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ BMTC ಬಸ್ – ಬಾಲಕಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.17. BMTC ಬಸ್ ಹರಿದು 4ರ ಹರೆಯದ ಬಾಲಕಿ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ.

ಮೃತ ಬಾಲಕಿಯನ್ನು ಪೂರ್ವಿ ರಾವ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಘಟನೆ ಸಂಬಂಧ ಕುಮಾರಸ್ವಾಮಿ ಲೇಔಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಗಳನ್ನು ಶಾಲೆಗೆ ಬಿಡಲೆಂದು ತಂದೆ ಪ್ರಸನ್ನ ದ್ವಿಚಕ್ರ ವಾಹನದಲ್ಲಿ ಕರೆದೊಯ್ಯುತ್ತಿದ್ದಾಗ ಮುಖ್ಯರಸ್ತೆಯ ಬಳಿ ವೇಗವಾಗಿ ಬಂದ ಬಿಎಂಟಿಸಿ ಬಸ್ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದ್ದು, ಈ ವೇಳೆ ಪ್ರಸನ್ನ ಅವರು ಎಡಬದಿಗೆ ಬಿದ್ದರೆ ಪೂರ್ವಿ ಬಲಬದಿ ಬಿದ್ದಿದ್ದಾರೆ. ಇದೇ ವೇಳೆ ಬಸ್ ಪೂರ್ವಿ ಮೇಲೆ ಹರಿದುಹೋಗಿದೆ ಎನ್ನಲಾಗಿದೆ.

Also Read  ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್‌ ನ್ಯೂಸ್‌ ಶೀಘ್ರದಲ್ಲೇ ಗೌರವಧನ ಹೆಚ್ಚಳ

 

error: Content is protected !!
Scroll to Top