ಚಂದ್ರಯಾನ- 3 ಲ್ಯಾಂಡರ್ ಪ್ರತ್ಯೇಕ ಪ್ರಕ್ರಿಯೆ ಯಶಸ್ವಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 18. ಜುಲೈ ತಿಂಗಳಲ್ಲಿ ಉಡಾವಣೆಗೊಂಡಿದ್ದ ಚಂದ್ರಯಾನ- 3 ಪ್ರಕ್ರಿಯೆಯಲ್ಲಿ ಇಸ್ರೋ ಮಹತ್ವದ ಘಟ್ಟ ತಲುಪಿದ್ದು, ಲ್ಯಾಂಡರ್ ಪ್ರತ್ಯೇಕ ಪ್ರಕ್ರಿಯೆ ಯಶಸ್ವಿಯಾಗಿದೆ ಎಂದು ಬಾಹ್ಯಾಕಾಶ ಸಂಸ್ಥೆ ಪ್ರಕಟಣೆ ತಿಳಿಸಿದೆ.

ಪ್ರೊಪಲ್ಷನ್ ಮಾಡ್ಯೂಲ್ ನಿಂದ ಪ್ರತ್ಯೇಕಗೊಂಡ ಲ್ಯಾಂಡರ್, ಚಂದ್ರನ ಅಂತಿಮ ಕಕ್ಷೆ ಪ್ರವೇಶಿಸಿದ್ದು, ಚಂದ್ರನಿಗೆ ಮತ್ತಷ್ಟು ಹತ್ತಿರವಾಗಿದೆ. ಇಂದು ಸಂಜೆ ವೇಳೆಗೆ ಡೀ-ಬೂಸ್ಟಿಂಗ್ ನಡೆಯಲಿದ್ದು, ಲ್ಯಾಂಡರ್ ನ್ನು ಹಂತ ಹಂತವಾಗಿ ಚಂದ್ರನ ಮೇಲ್ಮೈ ಗೆ ಇಳಿಸುವ ಪ್ರಕ್ರಿಯೆ ಪ್ರಾರಂಭವಾಗಲಿದೆ ಎನ್ನಲಾಗಿದೆ.

ಜುಲೈ 14ರಂದು ಉಡಾವಣೆಗೊಂಡ ಚಂದ್ರಯಾನ-3 ಆಗಸ್ಟ್ 5ರಂದು ಚಂದ್ರನ ಕಕ್ಷೆ ಪ್ರವೇಶಿಸಿತ್ತು. ಅದಾದ ಬಳಿಕ ಸತತ ಮೂರು ಕಕ್ಷೆಯ ಪರಿಚಲನೆ ಮೂಲಕ (ಆಗಸ್ಟ್ 6, 9 ಹಾಗೂ 14) ಚಂದ್ರನ ಮೇಲ್ಮೈಯ ಸನಿಹಕ್ಕೆ ತಲುಪಿದೆ. ಆಗಸ್ಟ್ 23ರಂದು ಸಾಫ್ಟ್ ಲ್ಯಾಂಡಿಂಗ್ ಮೂಲಕ ಚಂದ್ರನ ಮೇಲ್ಮೈಯಲ್ಲಿ ಲ್ಯಾಂಡರ್ ಅನ್ನು ಸುರಕ್ಷಿತವಾಗಿ ಇಳಿಸಲು ಯೋಜಿಸಲಾಗಿದೆ.

Also Read  16 ವರ್ಷದ ಬಾಲಕನಿಗೆ ಚೂರಿಯಿಂದ ಇರಿತ ➤ ಬಾಲಕ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತ್ಯು

error: Content is protected !!
Scroll to Top