ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ- ಪ್ರಕರಣ ದಾಖಲು



(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ.‌ 18. ಸ್ವತಃ ತಂದೆಯೋರ್ವ ತನ್ನ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿ ಆಕೆಯನ್ನು ಗರ್ಭಿಣಿಯನ್ನಾಗಿಸಿದ ಆಘಾತಕಾರಿ ಕೃತ್ಯ ಗೋಳಿತ್ತೊಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ನಡೆದಿದೆ.








ಆರೋಪಿ ತಂದೆಯನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ. ಗೋಳಿತೊಟ್ಟು ಗ್ರಾ.ಪಂ. ವ್ಯಾಪ್ತಿಯ ನಿವಾಸಿ ತನ್ನ ಮಗಳ ಮೇಲೆ ಕೆಲವು ತಿಂಗಳುಗಳ ಹಿಂದೆ ಅತ್ಯಾಚಾರವೆಸಗಿದ್ದು, ಮಗಳ ಆರೋಗ್ಯದಲ್ಲಿ ಏರುಪೇರಾಗಿರುವುದನ್ನು ಗಮನಿಸಿದ ತಾಯಿ ಮಗಳನ್ನು ಆ. 16ರಂದು ಆಸ್ಪತ್ರೆಗೆ ಕರೆದು ಕೊಂಡು ಹೋಗಿ ಪರೀಕ್ಷಿಸಿದಾಗ ಆಕೆ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ.






ಬಳಿಕ ಸಂತ್ರಸ್ತೆ ನೀಡಿದ ದೂರಿನಂತೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಉಪ್ಪಿನಂಗಡಿ ಪೊಲೀಸರು ಆರೋಪಿ ತಂದೆಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

error: Content is protected !!
Scroll to Top