ಮಂಗಳೂರು: ಇಂದು ಶೂನ್ಯ ನೆರಳು ದಿನ

(ನ್ಯೂಸ್ ಕಡಬ) newskadaba.com ಮಂಗಳೂರು,ಆ. 18. ಇಂದಿನ ದಿನವನ್ನು (ಆ.18ರ ಶುಕ್ರವಾರ) ಶೂನ್ಯ ನೆರಳಿನ ದಿನ ಎಂದು ಕರೆಯಲಾಗುತ್ತದೆ.

ಈ ಪ್ರಕಾರ ಬೆಳಗ್ಗೆ ಸೂರ್ಯನ ಬೆಳಕು ವ್ಯಕ್ತಿಯ ಮೇಲೆ ಬಿದ್ದಾಗ ಆ ನೆರಳು ಉದ್ದವಾಗಿರುತ್ತದೆ. ಮತ್ತು ಮಧ್ಯಾಹ್ನವಾಗುತ್ತಿದ್ದಂತೆ (ಮಧ್ಯಾಹ್ನ 12.35ಕ್ಕೆ) ನೆರಳು ಶೂನ್ಯವಾಗುತ್ತದೆ. ಪುನಃ ಸಾಯಂಕಾಲ ನೆರಳು ಉದ್ದವಾಗುತ್ತದೆ. ಪ್ರತಿಯೊಬ್ಬರು ಇದನ್ನು ವೀಕ್ಷಿಸಬಹುದು ಇಂಥ ವಿದ್ಯಮಾನ ವರ್ಷದಲ್ಲಿ ಎರಡು ಬಾರಿ ಮಾತ್ರ ಸಂಭವಿಸುತ್ತದೆ (ಮಂಗಳೂರಿನಲ್ಲಿ ಆಗಸ್ಟ್ 18 ಮತ್ತು ಏಪ್ರಿಲ್ 24ರಂದು) ಈ ಶೂನ್ಯ ನೆರಳಿನ ವಿದ್ಯಮಾನವು ಉತ್ತರ ಅಕ್ಷಾಂಶ 23.5ಡಿಗ್ರಿ ಮತ್ತು ದಕ್ಷಿಣ ಆಕಾಂಕ್ಷಿ 23.5 ಡಿಗ್ರಿ ಒಳಗಿನ ಸ್ಥಳಗಳಲ್ಲಿ ಅಕ್ಷಾಂಶದ ಮೇಲೆ ಹೊಂದಿಕೊಂಡು ಬೇರೆ ಬೇರೆ ಸ್ಥಳಗಳಲ್ಲಿ ಬೇರೆ ಬೇರೆ ದಿನಗಳಲ್ಲಿ ಸಂಭವಿಸುತ್ತದೆ.

Also Read  ಮಂಗಳೂರು :ಜಿಲ್ಲೆಯ ಹಾಲು ಉತ್ಪಾದಕರಿಗೆ ಮತ್ತೆ ಶಾಕ್


ಈ ವಿಶೇಷ ವಿದ್ಯಮಾನವನ್ನು ವೀಕ್ಷಿಸಲು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಿಂದ ಕೆಲವು ಪ್ರಾತ್ಯಕ್ಷಿಕೆಗಳನ್ನು ಕೇಂದ್ರದ ಆವರಣದಲ್ಲಿ ಆಯೋಜಿಸಲಾಗಿದೆ. ಆಸಕ್ತರು ವಿದ್ಯಮಾನದ ವಿವರಣೆಗಳನ್ನು ತಿಳಿಯಲು ಹಾಗೂ ಪ್ರಾತ್ಯಕ್ಷಿಕೆಗಳನ್ನು ವೀಕ್ಷಿಸಲು ಅವಕಾಶವಿದೆ. ಮೋಡ ಇಲ್ಲದ ವಾತಾವರಣ ಈ ವಿದ್ಯಮಾನ ವೀಕ್ಷಿಸಲು ಅನುಕೂಲಕರ ಶಾಲೆಗಳಲ್ಲಿ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಇದನ್ನು ಸುಲಭವಾಗಿ ವೀಕ್ಷಿಸಬಹುದು ಎಂದು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top