ಅಪ್ರಾಪ್ತ ವಿಕಲಚೇತನ ಬಾಲಕಿಯ ಮೇಲೆ ಅತ್ಯಾಚಾರ – ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 18. ಖಾಸಗಿ ಆಸ್ಪತ್ರೆಯಲ್ಲಿ ವಿಕಲಚೇತನ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿ ಪರಾರಿಯಾಗಲು ಯತ್ನಿಸುತ್ತಿದ್ದ ಮುಂಬೈ ಮೂಲದ ವ್ಯಕ್ತಿ ಹಾಗೂ ಆತನಿಗೆ ಸಹಕರಿಸಿದ ಮಹಿಳೆಯನ್ನು ಮಹಿಳಾ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ.


ಬಂಧಿತ ಆರೋಪಿಗಳನ್ನು ಮುಂಬೈನಲ್ಲಿ ನೆಲೆಸಿರುವ ಬಿಹಾರ ಮೂಲದ ಅಬ್ದುಲ್ ಹಲೀಂ (37) ಮತ್ತು ಕುಲಶೇಖರ ನಿವಾಸಿ ಶಮೀನಾ ಬಾನು (22) ಎಂದು ಗುರುತಿಸಲಾಗಿದೆ. ಇವರಿಬ್ಬರನ್ನೂ 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಸಂತ್ರಸ್ತೆ ಮಹಿಳೆಯ ಕಿರಿಯ ಸಹೋದರ ಮತ್ತು ಆರೋಪಿ ಅಬ್ದುಲ್ ಹಲೀಂ ಪರಸ್ಪರ ಸ್ನೇಹಿತರು. ಆಗಸ್ಟ್ 10 ರಂದು ಕಾಸರಗೋಡಿನಿಂದ ಬೈಕ್‌ನಲ್ಲಿ ಹಿಂತಿರುಗುತ್ತಿದ್ದ ವೇಳೆ ಅವರ ಬೈಕ್ ಅಪಘಾತಕ್ಕೀಡಾಗಿ, ಹೊಸಂಗಡಿಯಲ್ಲಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇಬ್ಬರೂ ಆಸ್ಪತ್ರೆಯ ಒಂದೇ ಕೋಣೆಯಲ್ಲಿದ್ದರು.

Also Read  ಕಡಬ ಪರಿಸರದಲ್ಲಿ ಹಲವು ಉದ್ಯೋಗಗಳು ➤ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಅಪಘಾತದ ಬಗ್ಗೆ ವಿಚಾರಿಸಲು ದೂರುದಾರ ಮಹಿಳೆ ಮತ್ತು ಅವರ ಹಿರಿಯ ಮಗಳು ಮಂಜೇಶ್ವರ ಠಾಣೆಗೆ ತೆರಳಿದ್ದರು. ದೂರುದಾರ ಮಹಿಳೆ ತನ್ನ ಕಿರಿಯ ಸಹೋದರನ ಪತ್ನಿ ಶಮೀನಾ ಬಾನು ಎಂಬಾಕೆಯೊಂದಿಗೆ ತನ್ನ ಕಿರಿಯ ವಿಕಲಚೇತನ ಮಗಳನ್ನು ಬಿಟ್ಟು ಹೋಗಿದ್ದರು. ಇತ್ತ ಆರೋಪಿ ಶಮೀನಾ ಬಾನು ಆಸ್ಪತ್ರೆಯಲ್ಲಿದ್ದ ಆರೋಪಿ ಅಬ್ದುಲ್ ಹಲೀಂ ಜೊತೆ ಅನೈತಿಕವಾಗಿ ವರ್ತಿಸುತ್ತಿರುವುದನ್ನು ಅಂಗವಿಕಲ ಬಾಲಕಿ ನೋಡಿದ್ದಾಳೆ. ನಂತರ ಶಮೀನಾ ವಿಕಲಚೇತನ ಬಾಲಕಿಯನ್ನು ಆರೋಪಿ ಅಬ್ದುಲ್ ಹಲೀಂನ ಬಳಿ ಕೂರಿಸಿದ್ದು, ಕೂಡಲೇ ಆರೋಪಿ ಕಿರುಕುಳ ನೀಡಲು ಪ್ರಾರಂಭಿಸಿದ್ದನು. ಹುಡುಗಿ ಕೃತ್ಯವನ್ನು ವಿರೋಧಿಸಿದಾಗ ಆರೋಪಿ ಶಮೀನಾ ಸಹಾಯದಿಂದ ಅಬ್ದುಲ್ ಹಲೀಂ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ.

ಈ ಸಂಬಂಧ ಸಂತ್ರಸ್ತೆಯ ತಾಯಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಆಗಸ್ಟ್ 16ರಂದು ಶಮೀನಾ ಬಾನು ಅವರನ್ನು ಬಂಧಿಸಲಾಗಿತ್ತು. ಮುಂಬೈಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಅಬ್ದುಲ್ ಹಲೀಂನನ್ನು ಗೋವಾ ಪೊಲೀಸರು ಮಡಗಾಂವ್‌ನಲ್ಲಿ ಬಂಧಿಸಿದ್ದಾರೆ. ಇಬ್ಬರನ್ನೂ 15 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Also Read  ಹೃದಯಾಘಾತ- ಯುವನಟ ವಿಧಿವಶ

error: Content is protected !!
Scroll to Top