ಕಾಡಾನೆ ತುಳಿದು ಕೂಲಿ ಕಾರ್ಮಿಕ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಸಕಲೇಶಪುರ, ಆ. 18. ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಇಂದು ಬೆಳಗ್ಗೆ ತಾಲೂಕಿನ ಕುನಿಗನಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಡೂರು ಗ್ರಾಮದಿಂದ ವರದಿಯಾಗಿದೆ.

ಮೃತ ಮಹಿಳೆಯನ್ನು ಕೂಲಿ ಕಾರ್ಮಿಕ ಮಹಿಳೆ ಪೂರ್ಣಿಮಾ (40) ಎಂದು ಗುರುತಿಸಲಾಗಿದೆ. ಕಾಡಾನೆಯು ಮಹಿಳೆಯ ಸೊಂಟದ ಭಾಗಕ್ಕೆ ಬಲವಾಗಿ ತುಳಿದಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಮಹಿಳೆಯನ್ನು ಸ್ಥಳೀಯರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳ ನೆರವಿನಿಂದ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

Scroll to Top