(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 18. ಪಡಿತರ ಚೀಟಿದಾರರಿಗೆ ವಿತರಿಸಲು ಆಹಾರ ಇಲಾಖೆಯಿಂದ ನೀಡಲಾಗಿದ್ದ ಅಕ್ಕಿಯಲ್ಲಿ ಕೋಟ್ಯಾಂತರ ರೂ. ಮೌಲ್ಯದ ಅವ್ಯವಹಾರ ನಡೆದಿರುವ ಕುರಿತು ಬಂಟ್ವಾಳದಿಂದ ವರದಿಯಾಗಿದೆ.
ಸುಮಾರು 1 ಕೋಟಿ 32 ಲಕ್ಷದ 36 ಸಾವಿರದ 30 ರೂ ಮೌಲ್ಯದ 3892.95.450 ಕಿಂಟ್ವಾಲ್ ಅಕ್ಕಿಯ ಕೊರತೆ ಕಂಡು ಬಂದಿದ್ದು, ಇಲ್ಲಿ ಅವ್ಯವಹಾರ ನಡೆದಿದೆ ಎಂದು ಕರ್ನಾಟಕ ಆಹಾರ ಮತ್ತು ಸರಬರಾಜು ನಿಗಮದ ಕಚೇರಿ ವ್ಯವಸ್ಥಾಪಕ ಶರತ್ ಕುಮಾರ್ ನೀಡಿದ ದೂರಿನಂತೆ ಹಾಂಡ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ಬಿಸಿರೋಡಿನ ಕೆಎಸ್ಸಾರ್ಟಿಸಿ ಡಿಪೋ ದ ಮುಂಭಾಗದಲ್ಲಿರುವ ಗೋಡೌನ್ ನಲ್ಲಿ ದಾಸ್ತಾನಿರಿಸಲಾಗಿದ್ದ ಅಕ್ಕಿಯ ಲೆಕ್ಕಾಚಾರದಲ್ಲಿ ಕೊರತೆ ಕಂಡುಬಂದ ಹಿನ್ನೆಲೆ ತನಿಖೆಗಾಗಿ ಪೋಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಡೌನ್ ಮೇಲ್ವಿಚಾರಕ ವಿಜಯ್ ಎಂಬಾತನನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದು, ವಶಕ್ಕೆ ಪಡೆಯುವ ಸಾಧ್ಯತೆಗಳಿವೆ. ಉಳಿದಂತೆ ವಿಜಯ್ ನೀಡಿದ ಮಾಹಿತಿ ಆಧರಿಸಿ ಈ ಪ್ರಕರಣದಲ್ಲಿ ಶಾಮೀಲಾಗಿರುವ ಎಲ್ಲಾ ಆರೋಪಿಗಳನ್ನು ಬಂಧಿಸುವ ಬಗ್ಗೆ ಕಾರ್ಯಚರಣೆ ಮುಂದುವರಿಸಿದ್ದಾರೆ ಎನ್ನಲಾಗಿದೆ.