ಟ್ಯೂಶನ್ ಮುಗಿಸಿ ಹಿಂತಿರುಗುತ್ತಿದ್ದ ಬಾಲಕನಿಗೆ ಗೂಡ್ಸ್ ಢಿಕ್ಕಿ- ಮತ್ತೋರ್ವ ಬಾಲಕ ಮೃತ್ಯು; ಸಾವಿನ ಸಂಖ್ಯೆ ಮೂರಕ್ಕೇರಿಕೆ

(ನ್ಯೂಸ್ ಕಡಬ) newskadaba.com ರಾಮನಗರ, ಆ. 18. ಟ್ಯೂಶನ್ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ಮಕ್ಕಳಿಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಗೊಂಡಿದ್ದ ಮತ್ತೋರ್ವ ಬಾಲಕ ಮೃತಪಟ್ಟ ಘಟನೆ ರಾಮನಗರದಲ್ಲಿ ನಡೆದಿದೆ.


ಮೃತ ಬಾಲಕನನ್ನು ಸುಚಿತ್ (10) ಎಂದು ಗುರುತಿಸಲಾಗಿದೆ. ಆಗಸ್ಟ್ ಒಂಬತ್ತರಂದು ಟ್ಯೂಶನ್ ಮುಗಿಸಿಕೊಂಡು ಹಿಂರುಗುತ್ತಿದ್ದ ಐವರು ವಿದ್ಯಾರ್ಥಿಗಳಿಗೆ ರಾಮನಗರ ತಾಲೂಕಿನ ಗೊಲ್ಲರದೊಡ್ಡಿ ಗ್ರಾಮದ ಬಳಿ ಗೂಡ್ಸ್ ವಾಹನ ಢಿಕ್ಕಿ ಹೊಡೆದಿದ್ದು, ಪರಿಣಾಮ ಇಬ್ಬರು ಮೃತಪಟ್ಡಿದ್ದರು. ಇದೀಗ ಮತ್ತೋರ್ವ ಬಾಲಕ ಮೃತಪಟ್ಡಿದ್ದು, ಸಾವಿನ ಸಂಖ್ಯೆ ಮೂರಕ್ಕೇರಿದೆ.

Also Read  ಮತ್ತೆ ಚಿನ್ನದ ದರದಲ್ಲಿ ಏರಿಕೆ

error: Content is protected !!
Scroll to Top