ಬುದ್ದಿವಾದ ಹೇಳಿದ ತಾಯಿ- ಮಗ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ಆ. 18. ರಾತ್ರಿ ವೇಳೆ ಮನೆಗೆ ತಡವಾಗಿ ಬರುತ್ತಿದ್ದ ಮಗನಿಗೆ ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಮಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದೇವನಹಳ್ಳಿಯ ವಿಜಯಪುರ ಪಟ್ಟಣದಲ್ಲಿ ನಡೆದಿದೆ.


ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಉಜ್ವಲ್ (18) ಎಂದು ಗುರುತಿಸಲಾಗಿದೆ. ಈತ ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣನಾಗಿ, ಬಳಿಕ ಮನೆಯಲ್ಲೇ ಉಳಿದಿದ್ದು, ಹೆಚ್ಚಾಗಿ ಮೊಬೈಲ್‍ ನಲ್ಲೇ ಕಾಲ ಕಳೆಯುತ್ತಿದ್ದ ಎನ್ನಲಾಗಿದೆ.

ಈ ವಿಚಾರವಾಗಿ ಅವನ ತಾಯಿ ಹಲವಾರು ಬಾರಿ ಬುದ್ಧಿ ಹೇಳಿದ್ದರು. ಅಲ್ಲದೇ ಬುಧವಾರದಂದು ರಾತ್ರಿ ಆತ ಮನೆಗೆ ತಡವಾಗಿ ಬಂದಿದ್ದನು. ಈ ಹಿನ್ನೆಲೆ ಆತನ ತಾಯಿ ಎಲ್ಲಿಗೆ ಹೋಗಿದ್ದೆ ಎಂದು ಪ್ರಶ್ನಿಸಿ ಬುದ್ಧಿವಾದ ಹೇಳಿದ್ದರು. ಇದರಿಂದಾಗಿ ಆತ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

Also Read  ಮುರ್ಡೇಶ್ವರ: ಸಮುದ್ರದಲ್ಲಿ ಮುಳುಗಿ ಬೆಂಗಳೂರಿನ ಯುವಕ ಮೃತ್ಯು

error: Content is protected !!
Scroll to Top