ಮನೆಗೆ ನುಗ್ಗಿ ಪತ್ರಕರ್ತನ ಗುಂಡಿಕ್ಕಿ ಹತ್ಯೆ

(ನ್ಯೂಸ್ ಕಡಬ) newskadaba.com ಬಿಹಾರ, ಆ. 18. ಪತ್ರಕರ್ತನೋರ್ವನನ್ನು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ಇಂದು ನಡೆದಿದೆ.


ಮೃತ ಪತ್ರಕರ್ತನನ್ನು ವಿಮಲ್ ಕುಮಾರ್ ಯಾದವ್ ಎಂದು ಗುರುತಿಸಲಾಗಿದೆ. ‘ದೈನಿಕ್​ ಜಾಗರಣ್​’ ಎಂಬ ಹಿಂದಿ ಸುದ್ದಿ ಪತ್ರಿಕೆಯಲ್ಲಿ ವರದಿಗಾರರಾಗಿ ಕೆಲಸ ಮಾಡುತ್ತಿದ್ದ ಇವರು,
ರಾಣಿಗಂಜ್ ಜಿಲ್ಲೆಯ ನಿವಾಸಿಯಾಗಿದ್ದು, ಅರಾರಿಯಾದಲ್ಲಿ ವಾಸವಿದ್ದರು.


ಇಂದು ಮುಂಜಾನೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ವಿಮಲ್​ ಅವರನ್ನು ಮನೆಯಿಂದ ಹೊರಗೆ ಕರೆದಿದ್ದು, ಅವರು ಹೊರಗೆ ಹೋಗದಿದ್ದಾಗ ಮನೆಯೊಳಗೆ ನುಗ್ಗಿ ಗುಂಡು ಹಾರಿಸಿದ್ದಾರೆ. ಪರಿಣಾಮ ವಿಮಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.  2019ರಲ್ಲಿ ವಿಮಲ್ ಕುಮಾರ್ ಅವರ ಸಹೋದರನನ್ನೂ ಕೂಡಾ ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ವಿಮಲ್​ ಒಬ್ಬರೇ ಸಾಕ್ಷಿಯಾಗಿದ್ದರು ಎಂದು ಹೇಳಲಾಗುತ್ತಿದೆ. ಸದ್ಯ ಘಟನೆ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ. ಘಟನೆಯ ಕುರಿತು ಸತ್ಯಾಸತ್ಯತೆ ಇನ್ನಷ್ಟೇ ಹೊರಬರಬೇಕಿದೆ.

Also Read  ಐಎಎಸ್ ಅಧಿಕಾರಿ ಸಿ.ಶಿಖಾ ಕೇಂದ್ರ ಸೇವೆಗೆ ವರ್ಗಾವಣೆ

error: Content is protected !!
Scroll to Top