ಕ್ರಶರ್ ಯಂತ್ರದಿಂದ ಲಕ್ಷಾಂತರ ರೂ. ಮೌಲ್ಯದ ಸೊತ್ತು ಕಳವು – ಆರೋಪಿಗಳಿಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 18. ಜಲ್ಲಿ ಕ್ರಶರ್ ವೊಂದರಲ್ಲಿ ಕ್ರಶರ್ ಯಂತ್ರದ ಲಕ್ಷಾಂತರ ರೂ. ಮೌಲ್ಯದ ಸ್ವತ್ತು ಕಳವುಗೈದಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಿಬ್ಬರ ಸಹಿತ ಸ್ವತ್ತುಗಳನ್ನು ಬಂಟ್ವಾಳ ನಗರ ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಕುರಿತು ವರದಿಯಾಗಿದೆ.

ಬಂಧಿತರನ್ನು ವಗ್ಗ ನಿವಾಸಿ ಸತೀಶ್ ಮತ್ತು ಬೆಳ್ತಂಗಡಿ ನಿವಾಸಿ ರೋಹಿತ್ ಎಂದು ಗುರುತಿಸಲಾಗಿದೆ. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.


ಬಿ.ಮೂಡ ಗ್ರಾಮದ ಪಲ್ಲಮಜಲು ಎಂಬಲ್ಲಿ ವಿನಯ ಶೆಟ್ಟಿ ಎಂಬವರಿಗೆ ಸೇರಿದ ಕ್ರಶರ್ ನಿಂದ ಕ್ರಶರ್ ಜಾಬ್ ಪ್ಲೇಟ್ ಒಂದು ವಾರಗಳ ಹಿಂದೆ ಕಳವಾಗಿತ್ತು. 450 ಕೆ.ಜಿ‌. ತೂಕದ ಸುಮಾರು 2,60,000 ಲಕ್ಷ ರೂ. ಮೌಲ್ಯದ ಸ್ವತ್ತನ್ನು ಕಳವು ಮಾಡಲಾಗಿರುವ ಎಂದು ನಗರ ಪೋಲಿಸ್ ಠಾಣೆಗೆ ದೂರು ನೀಡಲಾಗಿತ್ತು. ಈ ದೂರಿನ‌ಂತೆ ಕಾರ್ಯಚರಣೆ ನಡೆಸಿದ ಬಂಟ್ವಾಳ ನಗರ ಠಾಣಾ ಪೊಲೀಸರು ಲಕ್ಷಾಂತರ ರೂ. ಮೌಲ್ಯದ ಕಳವಾದ ಸ್ವತ್ತು ಹಾಗೂ ಕಳವಿಗೆ ಬಳಸಿದ ಕಾರನ್ನು ವಶಕ್ಕೆ ಪಡೆದುಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ.

Also Read  ಆಲಂಕಾರು: ವಿಷ ಸೇವಿಸಿ‌ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

error: Content is protected !!
Scroll to Top