ರಾಪ್ಷ್ರೀಯ ಪ್ರಧಾನ ಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗೆ ಅರ್ಹರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 18. ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಮಂತ್ರಾಲಯದಿಂದ 2023-24ನೇ ಸಾಲಿಗೆ ರಾಪ್ಷ್ರೀಯ ಪ್ರಧಾನ ಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.


ಗ್ರಾಮ ಪಂಚಾಯತ್ ಹಾಗೂ ಜಿಲ್ಲಾ ಮಟ್ಟದಲ್ಲಿ ಕೂಡ ಆ. 31ರೊಳಗೆ ಅರ್ಜಿ ಸಲ್ಲಿಸಬೇಕು. ಆದ ಕಾರಣ ಜಿಲ್ಲೆಯಲ್ಲಿ ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ ಹಾಗೂ ಕ್ರೀಡೆ, ಸಮಾಜ ಸೇವೆ, ವಿಜ್ಞಾನ ಮತ್ತು ತಂತ್ರಜ್ಞಾನ ಪರಿಸರ ಸಂರಕ್ಷಣೆ, ಕಲೆ ಮತ್ತು ಸಂಸ್ಕೃತಿ ಮತ್ತು ನೂತನ ಆವಿಷ್ಕಾರಗಳನ್ನು ಮಾಡಿ ಉತ್ತಮ ಸಾಧನೆ ಮಾಡಿದ 18 ವರ್ಷದೊಳಗಿನ ಮಕ್ಕಳನ್ನು ಗುರುತಿಸಿ ಆನ್‍ ಲೈನ್ https://awards.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ 0824-2440004 ಗೆ ಸಂಪರ್ಕಿಸುವಂತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಮೂಡುಶೆಡ್ಡೆ ಘರ್ಷಣೆ ➤ಆರೋಪಿಗಳ ಬಂಧನ

error: Content is protected !!
Scroll to Top