ಹನುಮಾನ್ ದೇವಳದ ಆವರಣದಲ್ಲಿ ಗೋಮಾಂಸ ಪತ್ತೆ; ಗೋಮುಗಲಭೆ ಸಾಧ್ಯತೆ ಹಿನ್ನೆಲೆ- ಬಿಗಿ ಬಂದೋಬಸ್ತ್

(ನ್ಯೂಸ್ ಕಡಬ) newskadaba.com ಬಿಹಾರ, ಆ. 19. ಇಲ್ಲಿನ ಔರಂಗಾಬಾದ್ ಜಿಲ್ಲೆಯಲ್ಲಿರುವ ಹನುಮಾನ್ ದೇವಾಲಯದ ಆವರಣದಲ್ಲಿ ಗೋಮಾಂಸ ಪತ್ತೆಯಾಗಿರುವ ಕುರಿತು ವರದಿಯಾಗಿದೆ.

ಘಟನೆಗೆ ಸಂಬಂಧಿಸಿ ಕೋಮುಗಲಭೆ ಸೃಷ್ಟಿಯಾಗುವ ಸಾಧ್ಯತೆ ಇರುವ ಹಿನ್ನೆಲೆ ದೇವಳದ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಹನುಮಾನ್ ದೇಗುಲದಲ್ಲಿ ಗೋಮಾಂಸ ಇರಿಸಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಭೇಟಿನೀಡಿದ ಪೊಲೀಸರು ದೇವಸ್ಥಾನದ ಅವರಣದಲ್ಲಿದ್ದ ಗೋಮಾಂಸವನ್ನು ತೆರವುಗೊಳಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಪೊಲೀಸರು ಸ್ಥಳೀಯರೊಂದಿಗೆ ಸಭೆ ನಡೆಸಿ, ಸಮೀಪದ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಗಳನ್ನು ಪರಿಶೀಲಿಸಿ ಸಮಾಜ ಘಾತುಕರನ್ನು ಗುರುತಿಸಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

Also Read  20 ತಿಂಗಳು ಜೈಲಲ್ಲಿ ಕಳೆದ ಅಮಾಯಕ ಯುವಕ   ➤ಯುವತಿ ಪ್ರತ್ಯಕ್ಷ...!!!  

error: Content is protected !!
Scroll to Top