ಸಾಕುನಾಯಿ ದಾಳಿ ಮಾಡಿದರೆ ಮಾಲೀಕರಿಗೆ 6 ವರ್ಷ ಜೈಲು ಶಿಕ್ಷೆ – ಪೊಲೀಸ್ ಇಲಾಖೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಮಡಿಕೇರಿ, ಆ. 19. ಸಾಕುನಾಯಿಗಳು ಯಾವುದೇ ವ್ಯಕ್ತಿಯ ಮೇಲೆ ದಾಳಿ ಮಾಡಿರುವ ಘಟನೆ ಕಂಡುಬಂದಲ್ಲಿ ಆ ನಾಯಿಯ ಮಾಲಕರ ಮೇಲೆ Section: 289 IPC ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು ಹಾಗೂ ಆರು ತಿಂಗಳ ಜೈಲುವಾಸ ಶಿಕ್ಷೆ ಮತ್ತು ದಂಡ ವಿಧಿಸಲಾಗುವುದು ಎಂದು ಕೊಡಗು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಸಾಕುನಾಯಿ ದಾಳಿ ಮಾಡಿರುವ ಪ್ರಕರಣಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಅಥವಾ ತುರ್ತು ಸಹಾಯವಾಣಿ 112ಗೆ ಕರೆ ಮಾಡುವಂತೆ ಹಾಗೂ ಕೆ.ಎಸ್.ಪಿ. ತಂತ್ರಾಶದ ಮೂಲಕ ಮಾಹಿತಿ ನೀಡಿ ಸಹಕರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಮಾಹಿತಿ ನೀಡುವವರ ವಿವರವನ್ನು ಬಹಿರಂಗಪಡಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Also Read  ಕೊನೆಗೂ ವಿಧಾನಸೌಧ ತಲುಪಿದ ನಾಪತ್ತೆಯಾಗಿದ್ದ ಕಾಂಗ್ರೆಸ್ ಶಾಸಕ ► ಆನಂದ ಸಿಂಗ್ ರನ್ನು‌ ಕಾದು ಕರೆತಂದ ಕಿಂಗ್ ಮೇಕರ್ ಡಿಕೆಶಿ

ಇತ್ತೀಚೆಗೆ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಕೊಣಂಜಗೇರಿ ಪಾರಾಣೆ ಗ್ರಾಮದಲ್ಲಿ ಆರೋಗ್ಯ ಅಧಿಕಾರಿ ಕೆ.ಕೆ.ಭವ್ಯಾ ಎಂಬವರ ಮೇಲೆ ನಡೆದ ಸಾಕುನಾಯಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಲಕ ಬಿ.ಮಾಚಯ್ಯ ಎಂಬವರ ವಿರುದ್ಧ ಪ್ರಕರಣ ದಾಖಲಾಗಿತ್ತು.

error: Content is protected !!
Scroll to Top