ಸುಳ್ಯ: ಲಂಚ ಪಡೆಯುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

(ನ್ಯೂಸ್ ಕಡಬ) newskadaba.com ಸುಳ್ಯ, ಆ. 19. ಜಮೀನಿಗೆ ಸಂಬಂಧಿಸಿದಂತೆ ಕಡತ ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ ವೇಳೆ ಸಂಪಾಜೆ- ಅರಂತೋಡು ಗ್ರಾಮ ಲೆಕ್ಕಾಧಿಕಾರಿ ಮಿಯಾಸಾಬ್ ಮುಲ್ಲಾ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಘಟನೆ ವರದಿಯಾಗಿದೆ.


ಅರಂತೋಡಿನ ವ್ಯಕ್ತಿಯೊಬ್ಬರು ಆಸ್ತಿ ಹಕ್ಕಿಗೆ ಸಂಬಂಧಿಸಿದ ಕಡತ ವಿಲೇವಾರಿಗೆ ಅರ್ಜಿ ಸಲ್ಲಿಸಿದ್ದರು. ಈ ಸಂದರ್ಭ ಲೆಕ್ಕಾಧಿಕಾರಿ ಮಿಯಾಸಾಬ್‌ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆ ವ್ಯಕ್ತಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

ಅದರಂತೆ ಶನಿವಾರದಂದು ಬೆಳಗ್ಗೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು, ಆರೋಪಿಯನ್ನು ಸುಳ್ಯ ತಾಲೂಕು ಪಂಚಾಯತ್ ಕಚೇರಿಯಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಲಂಚದ ಹಣದ ಬಗ್ಗೆ ಇನ್ನಷ್ಟೇ ಮಾಹಿತಿ ನೀಡಬೇಕಿದೆ. ಲೋಕಾಯುಕ್ತ ಪೊಲೀಸ್‌ ವರಿಷ್ಠಾಧಿಕಾರಿ ಸೈಮನ್, ಡಿವೈಎಸ್ಪಿ ಚೆಲುವರಾಜ್ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದೆ.

Also Read  ಜೂ. 17: ಜಿಲ್ಲಾ ಪ.ಜಾತಿ ಮತ್ತು ಪ.ಪಂಗಡಗಳ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ

error: Content is protected !!
Scroll to Top