ಆಕಾಶಭವನ ಬಶೀರ್ ಕೊಲೆ ಪ್ರಕರಣ ► ಮತ್ತೋರ್ವ ಆರೋಪಿ ಪುತ್ತೂರಿನಲ್ಲಿ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.06. ಇತ್ತೀಚೆಗೆ ಕಾಟಿಪಳ್ಳದಲ್ಲಿ ದುಷ್ಕರ್ಮಿಗಳಿಂದ ನಡೆದ ದೀಪಕ್ ರಾವ್ ಹತ್ಯೆಗೆ ಪ್ರತೀಕಾರವಾಗಿ ನಡೆದ ಆಕಾಶಭವನ ನಿವಾಸಿ ಬಶೀರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಕಾವೂರು ಪೊಲೀಸರು ಸೋಮವಾರದಂದು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಅಭಿಷೇಕ್ ಆರ್.ಎಸ್.(21) ಎಂದು ಗುರುತಿಸಲಾಗಿದೆ. ಪುತ್ತೂರು ತಾಲೂಕಿನ ಬನ್ನೂರು ಎಂಬಲ್ಲಿದ್ದ ಆರೋಪಿಯನ್ನು ವಿಶೇಷ ತನಿಖಾ ತಂಡದ ಕಾವೂರು ಠಾಣಾ ಪೊಲೀಸ್ ನಿರೀಕ್ಷಕ ಕೆ.ಆರ್.ನಾಯ್ಕ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಈ ಹಿಂದೆ ಪೊಲೀಸರು ಕಿಶನ್ ಪೂಜಾರಿ, ಶ್ರೀಜಿತ್, ಧನುಷ್ ಪೂಜಾರಿ, ಸಂದೇಶ್ ಕೋಟ್ಯಾನ್, ಪುಷ್ಪರಾಜ್ ಮತ್ತು ಲತೇಶ್ ಎಂಬವರನ್ನು ಬಂಧಿಸಿದ್ದರು. ಇದೀಗ ಬಂಧಿತರ ಸಂಖ್ಯೆ ಏಳಕ್ಕೇರಿದೆ.

Also Read  22.06.2020 News Highlights

error: Content is protected !!
Scroll to Top