ಗೃಹಲಕ್ಷ್ಮೀ ಯೋಜನೆಗೆ ಆ. 30ರಂದು ಮೈಸೂರಿನಲ್ಲಿ ಚಾಲನೆ – ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 19. ಗೃಹಲಕ್ಷ್ಮಿ ಯೋಜನೆಯ ಉದ್ಘಾಟನಾ ಕಾರ್ಯಕ್ರಮವನ್ನು ಆ. 30ರಂದು ಮೈಸೂರಿನಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.


ಈ ಕುರಿತು ಮಾಹಿತಿ ನೀಡಿದ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೈಸೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆ ಬೆಳಗಾವಿಯಲ್ಲಿ ನಡೆಯಬೇಕಿದ್ದ ಗೃಹಲಕ್ಷ್ಮೀ ಯೋಜನೆಯ ಚಾಲನೆ ಕಾರ್ಯಕ್ರಮವನ್ನು ಮೈಸೂರಿಗೆ ಸ್ಥಳಾಂತರಿಸಲಾಗಿದೆ ಎಂದರು.

error: Content is protected !!
Scroll to Top