ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ದಾಸ್ತಾನು – ಓರ್ವ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 20. ನಗರದ ಅಳಕೆ ನ್ಯೂಚಿತ್ರಾ ಸಮೀಪದ ಜನನಿಬಿಡ ವಸತಿ ಸಂಕೀರ್ಣದ ಬಳಿ ಅಕ್ರಮವಾಗಿ ಗ್ಯಾಸ್ ಸಿಲಿಂಡರನ್ನು ದಾಸ್ತಾನಿರಿಸಿದ ಪ್ರಕರಣಕ್ಕೆ ಸಂಬಂಧಿಸಿ ವ್ಯಕ್ತಿಯೋರ್ವನನ್ನು ಕದ್ರಿ ಪೊಲೀಸರು ಶನಿವಾರ ಬಂಧಿಸಿದ್ದಾರೆ.


ಬಂಧಿತ ಆರೋಪಿಯನ್ನು ಶೇಖ್ ಅಶಫ್ ಉದ್ದೀನ್ (59) ಎಂದು ಗುರುತಿಸಲಾಗಿದೆ. ಈತ ಮಂಗಳೂರು ಗ್ಯಾಸ್ ಲೈಟ್ ಆ್ಯಂಡ್ ಸರ್ವೀಸ್ ಸೆಂಟರ್ ಅಂಗಡಿಯ ಪಕ್ಕದ ಸಣ್ಣ ಕೊಠಡಿಯಲ್ಲಿ ಪರವಾನಿಗೆ ಇಲ್ಲದೆ ಗ್ಯಾಸ್ ಸಿಲಿಂಡರ್‌ಗಳನ್ನು ಅಕ್ರಮವಾಗಿ ದಾಸ್ತಾನಿರಿಸಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಅರ್ಧ ಗ್ಯಾಸ್ ತುಂಬಿದ 3 ಗೃಹ ಬಳಕೆಯ ಇಂಡೇನ್ ಮತ್ತು ಹೆಚ್‌ಪಿ ಗ್ಯಾಸ್ ಸಿಲಿಂಡರ್ ಸಹಿತ ಒಟ್ಟು 26 ವಿವಿಧ ಆಳತೆಯ ಗ್ಯಾಸ್ ಸಿಲಿಂಡರ್‌ ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಕೆ ಎಸ್‍ ಆರ್ ಟಿ ಸಿ ಹಳೇ ಬಸ್ ಪಾಸ್ ತೋರಿಸಿ ಪ್ರಯಾಣಕ್ಕೆ ಅವಕಾಶ

error: Content is protected !!
Scroll to Top