(ನ್ಯೂಸ್ ಕಡಬ) newskadaba.com ಮಂಗಳೂರು, ಆ. 20. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಸಾಮಾಜಿಕ ನ್ಯಾಯದ ಹರಿಕಾರ, ಮಾಜಿ ಮುಖ್ಯಮಂತ್ರಿ ದೇವರಾಜ ಅರಸುರವರ 108ನೇ ಜನ್ಮ ದಿನಾಚರಣೆಯನ್ನು ನಗರದ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಆ. 20ರ ಭಾನುವಾರ ಬೆಳಗ್ಗೆ 10.30ಕ್ಕೆ ಹಮ್ಮಿಕೊಳ್ಳಲಾಗಿದೆ.
ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ದೇವರಾಜ ಅರಸುರವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವರು. ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ಸಂಗಪ್ಪ ತಂಗಡಿಗಿ ಅವರು ಗೌರವ ಉಪಸ್ಥಿತಿ ವಹಿಸುವರು. ಶಾಸಕರಾದ ಡಿ. ವೇದವ್ಯಾಸ ಕಾಮತ್ ಅವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದರಾದ ನಳಿನ್ ಕುಮಾರ್ ಕಟೀಲ್, ರಾಜ್ಯಸಭಾ ಸಂಸದರಾದ ವೀರೇಂದ್ರ ಹೆಗ್ಗಡೆ, ಶಾಸಕರಾದ ಡಾ. ಭರತ್ ಶೆಟ್ಟಿ ವೈ, ಹರೀಶ್ ಪೂಂಜ, ರಾಜೇಶ್ ನಾಯ್ಕ್ ಯು, ಭಾಗೀರಥಿ ಮುರುಳ್ಯ, ಉಮಾನಾಥ ಎ. ಕೋಟ್ಯಾನ್, ಅಶೋಕ್ ಕುಮಾರ್ ರೈ, ವಿಧಾನ ಪರಿಷತ್ ಶಾಸಕರಾದ ಕೋಟ ಶ್ರೀನಿವಾಸ ಪೂಜಾರಿ, ಬಿ.ಎಂ. ಫಾರೂಕ್, ಕೆ. ಹರೀಶ್ ಕುಮಾರ್, ಎಸ್.ಎಲ್. ಭೋಜೇಗೌಡ, ಪ್ರತಾಪ ಸಿಂಹ ನಾಯಕ್, ಕೆ. ಮಂಜುನಾಥ ಭಂಡಾರಿ, ಮಹಾಪೌರರಾದ ಜಯನಂದ ಅಂಚನ್ ಅವರು ಭಾಗವಹಿಸುವರು.
ದೇವರಾಜ ಅರಸುರವರ ತತ್ವ ಮತ್ತು ಚಿಂತನೆಗಳ ಬಗ್ಗೆ ರಾಜ್ಯಮಟ್ಟದಲ್ಲಿ ಡಿ ದೇವರಾಜ ಅರಸು ಪ್ರಶಸ್ತಿ ಪುರಸ್ಕೃತರಾದ ಡಾ. ಎಂ. ಅಣ್ಣಯ್ಯ ಕುಲಾಲ್ ಉಳ್ತೂರು ಉಪನ್ಯಾಸ ನೀಡುವರು.