ಎಂಡಿಎಂಎ ಮಾದಕ ವಸ್ತು ಸಹಿತ ಆರೋಪಿಯ ಸೆರೆ – ಸಿಸಿಬಿ ಪೊಲೀಸರ ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 20. ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ಮಾದಕ ವಸ್ತುವಾದ ಎಂಡಿಎಂಎ ಅನ್ನು ಮಾರಾಟ ಮಾಡುತ್ತಿದ್ದ ಆರೋಪಿಯೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಹಸನ್ ಸಾಧಿಕ್ ಯಾನೆ ಬ್ಲೇಡ್ ಸಾಧಿಕ್(35) ಎಂದು ಗುರುತಿಸಲಾಗಿದೆ. ಈ ಹಿಂದೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡ ಆರೋಪಿಯಾಗಿರುವ ಈತ, ಬೆಂಗಳೂರಿನಿಂದ ಎಂಡಿಎಂಎ ಮಾದಕ ವಸ್ತುವನ್ನು ಖರೀದಿಸಿ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ಮಾರುತಿ 800 ಕಾರಿನಲ್ಲಿ ತಂದು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದನು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ನಿಷೇದಿತ ಮಾದಕ ವಸ್ತುವನ್ನು ಹೊಂದಿದ ಹಸನ್ ಸಾಧಿಕ್ ನನ್ನು ವಶಕ್ಕೆ ಪಡೆದು, ಆತನಿಂದ ಒಟ್ಟು 50 ಗ್ರಾಂ ತೂಕದ ರೂ. 2,50,000/-ಮೌಲ್ಯದ ಎಂಡಿಎಂಎ, ಕೃತ್ಯಕ್ಕೆ ಬಳಸಿದ ಮಾರುತಿ 800 ಕಾರು, ಮೊಬೈಲ್ ಫೋನ್ ಹಾಗೂ ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ.

Also Read  ಕಬಕ: ಚರಂಡಿಗಳಿಗೆ ಅಸಮರ್ಪಕ ಮೋರಿ ಅಳವಡಿಕೆ !!

ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಹಸನ್ ಸಾದಿಕ್ ಎಂಬಾತನ ವಿರುದ್ಧ ಈ ಹಿಂದೆ ಒಟ್ಟು 17 ಪ್ರಕರಣಗಳು ದಾಖಲಾಗಿದ್ದು, ಈತನು ಸುಮಾರು 6 ತಿಂಗಳಿನಿಂದ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದು, ಈತನ ವಿರುಧ್ದ ನ್ಯಾಯಾಲಯವು ವಾರಂಟ್ ಹೊರಡಿಸಿತ್ತು.

error: Content is protected !!
Scroll to Top