ಓವರ್ ಟೇಕ್ ಭರದಲ್ಲಿ ಸರಣಿ ಅಪಘಾತ – ನಾಲ್ವರಿಗೆ ಗಾಯ

Accident

(ನ್ಯೂಸ್ ಕಡಬ) newskadaba.com ಹೆಬ್ರಿ, ಆ. 20. ಓವರ್ ಟೆಕ್ ಮಾಡುವ ಭರದಲ್ಲಿ ಸರಣಿ ಅಪಘಾತ ಸಂಭವಿಸಿ, ನಾಲ್ವರು ಗಾಯಗೊಂಡ ಘಟನೆ ನಾಡ್ಪಾಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಜಕ್ಕನಮಕ್ಕಿ ಬಳಿ ನಡೆದಿದೆ.


ವರದಿಯ ಪ್ರಕಾರ, ಬೈಕ್ ನ್ನು ಕಾರೊಂದು ಓವರ್ ಟೇಕ್ ಮಾಡುತ್ತಿದ್ದ ಸಂದರ್ಭ ಮುಂದಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ನಾಲ್ವರು ಗಾಯಗೊಂಡಿದ್ದಾರೆ. ಅಪಘಾತದ ರಭಸಕ್ಕೆ ಕಾರುಗಳು ಹಾಗೂ ಬೈಕ್ ನುಜ್ಜುಗುಜ್ಜಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!
Scroll to Top