ವಿಧಾನ ಪರಿಷತ್ ಗೆ ಮೂವರು ಸದಸ್ಯರ ನಾಮ ನಿರ್ದೇಶನ

(ನ್ಯೂಸ್ ಕಡಬ) newskadaba.com ಬೆಂಗಳೂರು,ಆ. 20. ವಿಧಾನ ಪರಿಷತ್‌ ಸ್ಥಾನಕ್ಕೆ ಮೂವರು ಸದಸ್ಯರ ನಾಮ ನಿರ್ದೇಶನ ಮಾಡುವಂತೆ ರಾಜ್ಯ ಸರಕಾರ ಸಲ್ಲಿಸಿದ್ದ ಪ್ರಸ್ತಾವನೆಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅನುಮೋದನೆ ನೀಡಿದ್ದಾರೆ.


ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಟಿ ಉಮಾಶ್ರೀ, ಮಾಜಿ ಸಚಿವ ಎಂ.ಆರ್.ಸೀತಾರಾಮ್ ಹಾಗೂ ನಿವೃತ್ತ ಈಡಿ ಅಧಿಕಾರಿ ಸುಧಾಮ್ ದಾಸ್ ಅವರ ಹೆಸರನ್ನು ಅಂತಿಮಗೊಳಿಸಿ ಪಟ್ಟಿಯನ್ನು ಕಳುಹಿಸಿದ್ದರು. ಕಲಾವಿದರ ಕೋಟಾದಡಿ ಉಮಾಶ್ರೀ ಅವರಿಗೆ ಸ್ಥಾನ ನೀಡಿದರೆ, ಶಿಕ್ಷಣ ಕ್ಷೇತ್ರದ ಕೋಟಾದಡಿ ಎಂ.ಆರ್.ಸೀತಾರಾಮ್ ಹಾಗೂ ಸಮಾಜ ಸೇವೆ ಹೆಸರಲ್ಲಿ ಸುಧಾಮ್ ದಾಸ್ ಅವರಿಗೆ ನಾಮ ನಿರ್ದೇಶನ ಮಾಡುವಂತೆ ಕೋರಿ ಶಿಫಾರಸ್ಸು ಕಳುಹಿಸಲಾಗಿದೆ ಎಂದು ವರದಿ ತಿಳಿಸಿದೆ.

Also Read  ರಾಜ್ಯಮಟ್ಟದ ಅಂತರ್ಜಾಲ ಚಿತ್ರಕಲಾ ಸ್ಪರ್ಧೆ ➤ ಸುಳ್ಯದ ವಿದ್ಯಾರ್ಥಿನಿ ಮನುಜ್ಞ ಯು.ಬಿ ರಾಜ್ಯಕ್ಕೆ ಪ್ರಥಮ

 

error: Content is protected !!