ನಿಷೇಧಿತ ಎಂಡಿಎಂಎ ಮಾದಕ ವಸ್ತು ಮಾರಾಟ – ಬಿಕಾಂ ವಿದ್ಯಾರ್ಥಿ ಸಹಿತ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 20. ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಪದವಿ ವಿದ್ಯಾರ್ಥಿ ಸಹಿತ ಮೂವರನ್ನು ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ಬಂಧಿಸಿರುವ ಘಟನೆ ನಗರದ ಜೆಪ್ಪು ಮಜಿಲ ಎಂಬಲ್ಲಿ ನಡೆದಿದೆ.


ಬಂಧಿತ ಆರೋಪಿಗಳನ್ನು ಮಂಗಳೂರು ತಲಪಾಡಿಯ ಗುಡ್ಡೆ ಹೌಸ್ ನಿವಾಸಿ ಅಬ್ದುಲ್ ರವೂಫ್(29), ಕೇರಳದ ತಲಶ್ಶೇರಿ ಪಾನೂರು ನಿವಾಸಿ ಉಬೈದ್ ಕುನ್ಮಾಲ್(21) ಮತ್ತು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮೂಡಿಗೆರೆ ಮಾವಿನಕೆರೆ ನಿವಾಸಿ ಮುಹಮ್ಮದ್ ಇರ್ಷಾದ್(21) ಎಂದು ಗುರುತಿಸಲಾಗಿದೆ. ಈ ಪೈಕಿ ಉಬೈದ್ ಎಂಬಾತ ನಗರದ ಖಾಸಗಿ ಕಾಲೇಜೊಂದರ ಬಿ.ಕಾಂ. ವಿದ್ಯಾರ್ಥಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬಂಧಿತರಿಂದ 13,750 ರೂ. ಮೌಲ್ಯದ ಒಟ್ಟು 5.071 ಗ್ರಾಂ ಎಂಡಿಎಂಎ ಮಾದಕ ವಸ್ತು, 1,500 ರೂ. ನಗದು, ತೂಕ ಮಾಪನ, ಮೊಬೈಲ್ ಫೋನ್ ಹಾಗೂ 2 ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಅವುಗಳ ಒಟ್ಟು ಮೌಲ್ಯ 1,77,750 ರೂ. ಎಂದು ಪೊಲೀಸರು ಅಂದಾಜಿಸಿದ್ದಾರೆ. ಬಂಧಿತರನ್ನು ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಧೀಶರು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ.

error: Content is protected !!

Join the Group

Join WhatsApp Group