ರಾಜ್ಯ ರಾಜಧಾನಿಯಲ್ಲಿ ರೌಡಿಶೀಟರ್ ಬರ್ಬರ ಹತ್ಯೆ ► ರಕ್ಷಣೆಗಾಗಿ ಕಿ.ಮೀ. ಓಡಿದರೂ ನಡುರಸ್ತೆಯಲ್ಲೇ ಅಟ್ಟಾಡಿಸಿ ಕೊಂದರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.06. ರೌಡಿ ಶೀಟರ್ ಓರ್ವನನ್ನು ದುಷ್ಕರ್ಮಿಗಳು ಅಟ್ಟಾಡಿಸಿ ಹತ್ಯೆಗೈದ ಘಟನೆ ಸೋಮವಾರದಂದು ರಾಜ್ಯ ರಾಜಧಾನಿಯಲ್ಲಿ ನಡೆದಿದೆ.

ದುಷ್ಕರ್ಮಿಗಳಿಂದ ಹತ್ಯೆಗೊಳಗಾದಾತನ್ನು ರೌಡಿ ಸೈಕಲ್ ರವಿ ಸಹಚರ ಬನಶಂಕರಿ ಠಾಣಾ ವ್ಯಾಪ್ತಿಯ ರೌಡಿಶೀಟರ್ ಕುಮಾರ್ ಎಂದು ಗುರುತಿಸಲಾಗಿದೆ. ಯಲಚೇನಹಳ್ಳಿ ಮೆಟ್ರೋ ಸಮೀಪ ಈ ಹತ್ಯೆ ನಡೆದಿದ್ದು, ದುಷ್ಕರ್ಮಿಗಳು ನಡು ರಸ್ತೆಯಲ್ಲಿಯೇ ಅಟ್ಟಾಡಿಸಿ ಹೊಡೆದಿದ್ದಾರೆ. ಕುಮಾರ್ ಪ್ರಾಣ ಉಳಿಸಿಕೊಳ್ಳಲು ಒಂದು ಕಿಮೀ ಓಡಿದರೂ ಬೆನ್ನು ಬಿಡದ ದುಷ್ಕರ್ಮಿಗಳು ಕುಮಾರ್ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಹತ್ಯೆ ನಡೆದಿದೆಯೆನ್ನಲಾಗಿದ್ದು, ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಈ ಸಂಬಂಧ ಕುಮಾರಸ್ವಾಮಿ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಪ್ಲಾಸ್ಮಾ ದಾನಗೈದು ಜೀವ ರಕ್ಷಣೆ ಮಾಡಿದ ಜಿಲ್ಲೆಯ ಪ್ರಥಮ ಪೊಲೀಸ್ ➤ ಮಾನವೀಯ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ

error: Content is protected !!
Scroll to Top