ಸಂಭೋಗಕ್ಕೆ ಸಮ್ಮತಿಸದ ಯುವತಿ- ಸ್ಕ್ರೂ ಡ್ರೈವರ್ ನಿಂದ ಚುಚ್ಚಿ ಹಲ್ಲೆ ಮಾಡಿದ ಯುವಕ

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಆ. 20. ಸಂಭೋಗಕ್ಕೆ ಒಪ್ಪದ ಲಿವ್‌ ಇನ್‌ ರಿಲೇಷನ್‌ ಶಿಪ್‌ನಲ್ಲಿದ್ದ ಮಹಿಳೆಯೋರ್ವರಿಗೆ ವ್ಯಕ್ತಿಯೋರ್ವ ಸ್ಕ್ರೂ ಡ್ರೈವರ್‌ನಿಂದ ಇರಿದು ಭೀಕರವಾಗಿ ಹಲ್ಲೆ ಮಾಡಿರುವ ಘಟನೆ ಹರಿಯಾಣದ ಗುರುಗ್ರಾಮದಲ್ಲಿ ನಡೆದಿದೆ.


ಉತ್ತರ ಪ್ರದೇಶ ಮೂಲದ ಶಿವಂ ಕುಮಾರ್‌ ಎಂಬಾತ ಗುರುಗ್ರಾಮದಲ್ಲಿ ವಾಸಿಸುತ್ತಿದ್ದು, ಈತ ತನ್ನ ಲಿವ್‌ ಇನ್‌ ರಿಲೇಷನ್‌ ಶಿಪ್‌ ಮಹಿಳೆಯ ಜೊತೆ ಸಂಭೋಗ ನಡೆಸಲು ಯತ್ನಿಸಿದ್ದಾನೆ. ಆದರೆ ಆಕೆ ಅದಕ್ಕೆ ಒಪ್ಪಿರಲಿಲ್ಲ. ಇದರಿಂದ ಸಿಟ್ಟುಗೊಂಡ ವ್ಯಕ್ತಿ ಆಕೆಯ ಕುತ್ತಿಗೆಯನ್ನು ಹಿಸುಕಿ, ಸ್ಕ್ರೂಡ್ರೈವರ್‌ ನಿಂದ ಚುಚ್ಚಿ ಹಲ್ಲೆ ಮಾಡಿದ್ದಾನೆ. ತೀವ್ರ ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಆಕೆ ಚೇತರಿಸಿಕೊಳ್ಳುತ್ತಿದ್ದಾಳೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಈ ಕುರಿತು ಮಹಿಳೆ ತನ್ನ ಲಿವ್‌ ಇನ್‌ ರಿಲೇಷನ್‌ಶಿಪ್‌ ಯುವಕನ ವಿರುದ್ಧ ದೂರು ದಾಖಲಿಸಿದ್ದಾಳೆ.

Also Read  ದಕ್ಷಿಣ ಕನ್ನಡದಲ್ಲಿ ಕೊರೋನಾ ಸೋಂಕಿಗೆ ಮತ್ತೊಂದು ಬಲಿ ➤ 69 ವರ್ಷದ ವೃದ್ಧೆ ಮೃತ್ಯು

error: Content is protected !!
Scroll to Top