ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 20. ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ ಕಳೆದ ಒಂದೂವರೆ ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯೋರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ.

ಬಂಧಿತ ವ್ಯಕ್ತಿಯನ್ನು ಮುಡಿಪು ನಿವಾಸಿ ಮುಡಿಪು ರಫೀಕ್ (36) ಎಂದು ಕರೆಯಲ್ಪಡುವ ಮೊಹಮ್ಮದ್ ರಫೀಕ್ ಎಂದು ಗುರುತಿಸಲಾಗಿದೆ. ಪೊಲೀಸರು ರಫೀಕ್ ನನ್ನು ಬೆಂಗಳೂರಿನ ಹೊಸಕೋಟೆಯಲ್ಲಿ ಬಂಧಿಸಿ, ಅನಂತರ ಮಹಿಳಾ ಪೊಲೀಸ್ ಠಾಣೆಗೆ ವರ್ಗಾಯಿಸಿದ್ದಾರೆ.

ರಫೀಕ್ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಕಳ್ಳತನ ಪ್ರಕರಣ, ಬರ್ಕೆ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ, ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ, ಪೂರ್ವ ಪೊಲೀಸ್ ಠಾಣೆಯಲ್ಲಿ ಡಕಾಯಿತಿ ಪ್ರಕರಣ, ಕೊಣಾಜೆಯಲ್ಲಿ ಅಪಹರಣ ಪ್ರಕರಣಗಳಲ್ಲಿ ಭಾಗಿಯಾಗಿದ್ದಲ್ಲದೇ, ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಕಳ್ಳತನ ಪ್ರಕರಣಗಳು, ಕೇರಳದ ಮಂಜೇಶ್ವರ, ಕಣ್ಣೂರು ಮತ್ತು ತಲಶೇರಿ ಪೊಲೀಸ್ ಠಾಣೆಗಳಲ್ಲೂ ಪ್ರಕರಣ ದಾಖಲಾಗಿತ್ತು.

Also Read  ಶ್ರೀನಿವಾಸ ವಿಶ್ವವಿದ್ಯಾಲಯದಿಂದ ರೋಬೊಟಿಕ್ಸ್ ಮತ್ತು ಮಿಷನ್ ಲರ್ನಿಂಗ್ ಎಂಬ ವೆಬ್‍ನಾರ್

error: Content is protected !!
Scroll to Top