ಪ್ರೇಯಸಿ ಸಾವಿನಿಂದ ಬೇಸತ್ತಿದ್ದ ಯುವಕ ಆತ್ಮಹತ್ಯೆ



(ನ್ಯೂಸ್ ಕಡಬ) newskadaba.com ಬ್ರಹ್ಮಾವರ, ಆ. 21. ಗೆಳತಿಯ ಸಾವಿನಿಂದ ಮಾನಸಿಕವಾಗಿ ನೊಂದಿದ್ದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರ ಸಮೀಪದ ನೀಲಾವರ ಬಾವಲಿಕುದ್ರುವಿನಲ್ಲಿ ನಡೆದಿದೆ.








ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಬಾವಲಿಕುದ್ರು ನಿವಾಸಿ ಸುಜಿತ್ ಡೇವಿಡ್ ಡಿಸೋಜಾ (21) ಎಂದು ಗುರುತಿಸಲಾಗಿದೆ. ಖಾಸಗಿ ಕಾಲೇಜೊಂದರಲ್ಲಿ 2 ನೇ ವರ್ಷದ ಬಿಕಾಂ ವ್ಯಾಸಂಗ ಮಾಡುತ್ತಿದ್ದ ಸುಜಿತ್ ಪ್ರೀತಿಸುತ್ತಿದ್ದ ಹುಡುಗಿ ಕೆಲ ದಿನಗಳ ಹಿಂದೆ ಮೃತಪಟ್ಟಿದ್ದಳು. ಇದೇ ವಿಚಾರವಾಗಿ ಮಾನಸಿಕವಾಗಿ ಕುಗ್ಗಿಹೋಗಿದ್ದ ಸುಜಿತ್, ಭಾನುವಾರದಂದು ಮನೆಯಲ್ಲೇ ನೇಣು ಹಾಕಿಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಘಟನೆಯ ಕುರಿತು ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






error: Content is protected !!
Scroll to Top